ಶಾಲಾ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ – ಶಾಸಕ ಅನಿಲ ಬೆನಕೆ
ಪ್ರಗತಿವಾಹಿನಿ ಸುದ್ದಿ – ಬೆಳಗಾವಿ : ಶಾಸಕ ಅನಿಲ ಬೆನಕೆರವರು ಬೆಳಗಾವಿಯ ವೀರಭದ್ರ ನಗರದ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಯನ್ನು ಸಲ್ಲಿಸಿದರು.
ಕಟ್ಟಡ ಭೂಮಿ ಪೂಜೆಯನ್ನು ಸಲ್ಲಿಸಿದ ಬಳಿಕ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ ಮಾತನಾಡಿದ ಶಾಸಕರು ಶಾಲಾ ಕಟ್ಟಡ ಕಾಮಗಾರಿಯನ್ನು ಕರ್ನಾಟಕ ಸರ್ಕಾರದ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸುಮಾರು 50 ಲಕ್ಷ ರೂ.ಗಳು ಬಿಡುಗಡೆ ಆಗಿದ್ದು ಆ ಅನುದಾನದಡಿಯಲ್ಲಿ ಶಾಲೆಯ ಆವರಣದಲ್ಲಿ ಸುಸಜ್ಜಿತ ಕಟ್ಟಡಗಳನ್ನು ನಿರ್ಮಾಣ ಮಾಡುವ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಶಾಲೆಯಲ್ಲಿನ ವಿದ್ಯಾರ್ತಿಗಳಿಗೆ ಕೊಠಡಿ ಕೊರತೆಯನ್ನು ನಿಗಿಸುವ ಸಲುವಾಗಿ ಆದಷ್ಟು ಬೇಗನೆ ಕಟ್ಟಡ ಕಾಮಗಾರಿಯನ್ನು ಪೂರ್ತಿಗೊಳಿಸಿ ಶಾಲೆಯ ಉಪಯೋಗಕ್ಕಾಗಿ ನೀಡಲಾಗುವುದು ಎಂದರು ಮತ್ತು ನನ್ನ ಮತಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃಧ್ದಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ತಿಳಿಸಿದರು.
ಈ ಸದರ್ಭದಲ್ಲಿ ಶಾಸಕರೊಂದಿಗೆ ಶಾಲೆಯ ಮುಖ್ಯ ಗುರುಗಳಾದ ಶ್ರೀಮತಿ. ಎಸ. ಓ. ಜಮಾದಾರ, ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪಯಾಜ್ ಶೇಖ, ಅನಿಲ ಕೇಸರಕರ, ಬಾಬಾಜನ ಮತವಾಲೆ ಮಾಜಿ ನಗರ ಸೇವಕರು, ಗುತ್ತಿಗೆದಾರರಾದ ಮಹಾದೇವ ಪಿರಗಿ ಹಾಗೂ ಇತರರು ಉಪಸ್ಥಿತರಿದ್ದರು.////
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ