
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಣ್ಯ ವಸತಿ ವಿಹಾರಧಾಮ ಸಂಸ್ಥೆಯ ಭೀಮಗಡ ಅಡ್ವೆಂಚರ್ ಕ್ಯಾಂಪ್ ನಲ್ಲಿ ಈಜುಕೊಳ, ಸಾಹಸ ಚಟುವಟಿಕೆಗಳ ಮತ್ತು ಸ್ಥಳ ವಿಕ್ಷಣೆಯ ಉದ್ಘಾಟನೆ ಕಾರ್ಯಕ್ರಮ ಭಾನುವಾರ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಬೆಳಗಾವಿ ದೇಸೂರ ಹತ್ತಿರ ಕಾಟಗಾಳಿ ಗ್ರಾಮದ ಬಳಿ ಇರುವ ಅರಣ್ಯ ವಸತಿ ವಿಹಾರಧಾಮಗಳ ಸಂಸ್ಥೆಯ ಭೀಮಗಡ ಅಡ್ವೆಂಚರ್ ಕ್ಯಾಂಪ್ ಇಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಈಜುಕೊಳ ಮತ್ತು ಸಾಹಸ ಚಟುವಟಿಕೆಗಳ ಹಾಘೂ ಸ್ಥಳ ವೀಕ್ಷಣೆಯ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಬೆಳಗಾವಿ ಸಂಸದೆ ಮಂಗಲಾ ಅಂಗಡಿ, ಶಾಸಕರುಗಳಾದ ಅಂಜಲಿ ನಿಂಬಾಳಕರ, ಅಭಯ ಪಾಟೀಲ, ಅನಿಲ ಬೆನಕೆ, ಲಕ್ಷ್ಮಿ ಹೆಬ್ಬಾಳಕರ ಹಾಗೂ ವಿಹಾರಧಾಮ ಸಂಸ್ಥೆಯ ಅಧ್ಯಕ್ಷರಾದ ರಾಜೇಶ ಕೊಟ್ಟೆನ್ನವರ, ಸಂಸ್ಥೆಯ ಎಲ್ಲ ನಿರ್ದೇಶಕರು, ಕಾಟಗಾಳಿಯ ಗ್ರಾಮ ಪಂಚಾಯತಿಯ ಸದಸ್ಯರು, ಗ್ರಾಮಸ್ಥರು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿರುವರು.
ಮುಂಬರುವ ದಿನಗಳಲ್ಲಿ ಸಂಸ್ಥೆಯಿಂದ ಒಂದು ದಿನದ ಸಾಹಸ ಚಟುವಟಿಕೆ ಮತ್ತು ಸ್ಥಳ ವೀಕ್ಷಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದರಿಂದ ಬೆಳಗಾವಿ ಜಿಲ್ಲೆಯ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಹಾಗೂ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿಬೇಕೆಂದು ಸಂಸ್ಥೆಯ ನಿರ್ದೇಶಕ ದೇವರಾಜ ತಮ್ಮಣ್ಣಾ ಬಸ್ತವಾಡೆ ವಿನಂತಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ