Kannada NewsKarnataka News

ಒಕ್ಕೂಟ, ಕ್ರೀಡಾ ಮತ್ತು ರಾಷ್ಟ್ರೀಯ ಸೇವೆಗಳ ಪ್ರಾಧಿಕಾರದ ಚಟುವಟಿಕೆಗಳ ಉದ್ಘಾಟನೆ

ಒಕ್ಕೂಟ, ಕ್ರೀಡಾ ಮತ್ತು ರಾಷ್ಟ್ರೀಯ ಸೇವೆಗಳ ಪ್ರಾಧಿಕಾರದ ಚಟುವಟಿಕೆಗಳ ಉದ್ಘಾಟನೆ

ಬೆಳಗಾವಿ ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ಒಕ್ಕೂಟ ಮತ್ತು ಕ್ರೀಡಾ ವಿಭಾಗದ ಉದ್ಘಾಟನೆಯನ್ನು ಹುಬ್ಬಳ್ಳಿ ಕಾನೂನು ವಿಶ್ವವಿದ್ಯಾಲಯದ ಕುಲಸಚಿವ ಆರ್.ರವಿಶಂಕರ ನೆರವೇರಿಸಿದರು. ಪ್ರಾಚಾರ್ಯ ಡಾ.ಬಿ.ಜಯಸಿಂಹ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಕಾನೂನು ವಿದ್ಯಾರ್ಥಿಗಳು ತಮ್ಮ ಪವಿತ್ರ ಕಾನೂನು ವೃತ್ತಿಯಲ್ಲಿ ಯಶಸ್ಸು ಗಳಿಸಬೇಕಾದರೆ ನೀವು ನಿಮ್ಮ ಪರಿಮಿತ ವಲಯದಿಂದ ಹೊರಬಂದು ಸಾಮಾಜಿಕ ಬೆಳವಣಿಗೆಯ ಅವಿಭಾಜ್ಯ ಅಂಗವಾಗಬೇಕು ಎಂದು ಹುಬ್ಬಳ್ಳಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಸಚಿವ ಆರ್. ರವಿಶಂಕರ ಹೇಳಿದರು.

ಶನಿವಾರ ನಗರದ ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ಕಾಲೇಜು ಒಕ್ಕೂಟ ಮತ್ತು ಕ್ರೀಡಾ ವಿಭಾಗದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಮಹಾವಿದ್ಯಾಲಯದ ಪಠ್ಯ, ಪಠ್ಯೇತರ ಮತ್ತು ಮಹಾವಿದ್ಯಾಲಯದ ಪ್ರತಿಯೊಂದು ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಲು ಕರೆ ನೀಡಿದ ಅವರು, ವಿದ್ಯಾರ್ಥಿಗಳು ವಿವಿಧ ರೀತಿಯ ಪ್ರಗತಿಪರ ಸಂಘಟನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾನೂನು ವೃತ್ತಿಗೆ ಸಂಬಂಧಿಸಿದ ಕೌಶಲ್ಯ, ಸಂವಹನ ಕಲೆ, ದಕ್ಷತೆ, ಏಕತೆ ಮತ್ತು ಮುಂದಾಳತ್ವದ ಕಲೆಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಕರಗತ ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಆರ್. ಬಿ. ಬೆಲ್ಲದ ಅವರು ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಕಾರ್ಯದರ್ಶಿಗಳಿಗೆ ಪ್ರಮಾಣವಚನ ಬೋದಿಸಿ ಮಹಾವಿದ್ಯಾಲಯದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ತಿಳಿಸಿದರು.
ವಿದ್ಯಾರ್ಥಿನಿಯರಾದ ಸುನಂದಾ ಮತ್ತು ಸಂಗಡಿಗರಿಂದ ಗಾಯನ ನಡೆಯಿತು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಿ. ಜಯಸಿಂಹ ಪರಿಚಯಿಸಿ ಸ್ವಾಗತಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅಬಿಷೇಕ ಹಪ್ಪಳಿ ವಂದಿಸಿದರು.  ಮಾಣಿಕ ನೇಸರಕರ್ ನಿರೂಪಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button