LatestNationalPolitics

*BREAKING: ಕಾಂಗ್ರೆಸ್ ಹೈಕಮಾಂಡ್ ಹೈವೋಲ್ಟೇಜ್ ಸಭೆ ಮುಕ್ತಾಯ: ಗುಟ್ಟು ಬಿಟ್ಟುಕೊಡದ ಕೈ ನಾಯಕರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ಗೊಂದಲಗಳಿಗೆ ಇಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ತೆರೆ ಎಳೆಯುವ ನಿಟ್ಟಿನಲ್ಲಿ ಕರೆದಿದ್ದಾರೆ ಎನ್ನಲಾದ ಹೈವೋಲ್ಟೇಜ್ ಸಭೆ ಮುಕ್ತಾಯಗೊಂಡಿದೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾಅನ ಕಾಅರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲಗಳು ಇಲ್ಲ. ಊಹಾಪೋಹಗಳನ್ನು ನಿಲ್ಲಿಸಿ ಎಂದು ಹೈಕಾಂಡ್ ನವರು ಸೂಚನೆ ನೀಡಿದ್ದಾರೆ ಎಂದರು.

Home add -Advt

ಹೈಕಮಾಂಡ್ ನಡೆಸಿದ ಸಭೆಯಲ್ಲಿ ನಾವು ನಾಯಕತ್ವದ ಬಗ್ಗೆ ಚರ್ಚೆಯನ್ನೇ ಮಾಡಿಲ್ಲ. ನಾವು ರಾಜ್ಯಸಭೆ, ವಿಧಾನ ಪರಿಷತ್ ಚುನಾವಣೆಗಳ ಬಗ್ಗೆ ಮಾತ್ರ ಚರ್ಚೆ ನಡೆಸಿದ್ದೇವೆ. ಅದನ್ನು ಬಿಟ್ಟು ಬೇರೆ ಯಾವ ಚರ್ಚೆಯೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ವಿಚಾರವಾಗಿ ಯಾವುದೇ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.

ನಾಯಕತ್ವ ಬದಲಾವಣೆ ಕುರಿತು ಚರ್ಚೆ ತೀವ್ರಗೊಂಡ ಬೆನ್ನಲ್ಲೇ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಬುಲಾವ್ ನೀಡಿದ ಕಾರಣಕ್ಕೆ ದೆಹಲಿಗೆ ದೌಡಾಯಿಸಿದ್ದಾರೆ ಎನ್ನಲಾಗಿತ್ತು. ಇಂದು ನಡೆಯುವ ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ಹೈಕಮಾಂಡ್ ನಾಯಕರು ತೆರೆ ಎಳೆಯಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸಭೆಯಲ್ಲಿ ನಾಯಕತ್ವ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಕಾಂಗ್ರೆಸ್ ನಲ್ಲಿ ಯಾವ ಗೊಂದಲವೂ ಇಲ್ಲ ಎಂದು ಕೆ.ಸಿ.ವೇಣುಗೋಪಾಲ್ ತಿಳಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಆದರೆ ಮೂಲಗಳ ಪ್ರಕಾರ ಇನ್ನು 2 ದಿನಗಳಲ್ಲಿ ಸಿದ್ದರಾಮಯ್ಯ ರಾಜಿನಾಮೆ ನೀಡಲಿದ್ದು, ಡಿ.ಕೆ.ಶಿವಕುಮಾರ ನೂತನ ನಾಯಕರಾಗಿ ಆಯ್ಕೆಯಾಗಲಿದ್ದಾರೆ. ಆದರೆ ಮುಖಂಡರು ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ.

Related Articles

Back to top button