ಜನರ ಪಾಲ್ಗೊಳ್ಳುವಿಕೆಯಿಂದ ಪಂಚಾಯಿತಿ ವ್ಯವಸ್ಥೆಗೆ ಬಲ -ಶಾಸಕಿ ಲಕ್ಷ್ಮಿ ಹೆಬ್ಬಾಳಕರ್
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ ಕಟ್ಟಡವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಉದ್ಘಾಟಸಿದರು.
ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಜನರ ಗ್ರಾಮ ಪಂಚಾಯಿತಿಯ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳಲು ಸಾಧ್ಯವಾಗುತ್ತದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಈ ಸಂದರ್ಭದಲ್ಲಿ ವಿಧಾನ್ ಪರಿಷತ್ ನ ಸರಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಉಪಸ್ಥಿತರಿದ್ದು, ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಒತ್ತು ನೀಡಲಾಗುತ್ತಿದೆ. ಜನರ ಸಹಭಾಗಿತ್ವ ಇದ್ದಾಗ ಇದು ಇನ್ನಷ್ಟ ಬಲಗೊಳ್ಳುತ್ತದೆ ಎಂದರು.
ತಾಲೂಕ ಪಂಚಾಯತ್ ಅಧ್ಯಕ್ಷ ಶಂಕರಗೌಡ ಪಾಟೀಲ, ಯುವ ಮುಖಂಡ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಗುರು ಹಿರಿಯರು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ರೇಶನ್ ಸಾಮಗ್ರಿ ವಿತರಣೆ
ಇದೇ ವೇಳೆ ಕುಕಡೊಳ್ಳಿ ಗ್ರಾಮದಲ್ಲಿ ನರೇಗಾದ ಅಡಿಯಲ್ಲಿ ದುಡಿಯುತ್ತಿರುವ ಕಾರ್ಮಿಕರನ್ನು ಭೇಟಿ ಮಾಡಿದ ಶಾಸಕ ಲಕ್ಷ್ಮಿ ಹೆಬ್ಬಾಳಕರ್, ಅವರ ಆರೋಗ್ಯ ಹಾಗೂ ಕುಂದುಕೊರತೆಗಳ ಬಗ್ಗೆ ವಿಚಾರಿಸಿದರು. ಜೊತೆಗೆ ಲಕ್ಷ್ಮೀ ತಾಯಿ ಫೌಂಡೇಷನ್ ವತಿಯಿಂದ ರೇಷನ್ ಸಾಮಾಗ್ರಿಗಳನ್ನು ವಿತರಿಸಿ ಅವರ ಕಷ್ಟಗಳಿಗೆ ಸ್ಪಂದಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ