ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ವಿಶ್ವೇಶ್ವರಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮಹಿಳಾ ಅಧ್ಯಯನ ಕೇಂದ್ರವನ್ನು ಉದ್ಘಾಟಿಸಲಾಯಿತು.
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮತ್ತು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಹಿಳಾ ಅಧ್ಯಯನ ಕೇಂದ್ರವನ್ನು ಮತ್ತು ಮೂರು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿದರು.
ಸುಧಾ ಮೂರ್ತಿ ಅವರು ಭಾರತದ ಅಭಿವೃದ್ಧಿಯಲ್ಲಿ ಮಹಿಳೆಯ ಪಾತ್ರ ಕುರಿತು ಉಪನ್ಯಾಸ ಮಾಡಿದರು. ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡರು. ನಮ್ಮ ರಾಷ್ಟ್ರದಲ್ಲಿ ಸ್ತ್ರೀಗೆ ದೇವತೆಯ ಸ್ಥಾನವನ್ನು ನೀಡಿದ್ದು ಜಾಗತಿಕ ದೃಷ್ಟಿಯಲ್ಲಿ ಮಹಿಳೆ ಯಾವಾಗಲೂ ಸಾಂಸ್ಕೃತಿಕ ರಾಯಭಾರಿ ಆಗಿದ್ದಾಳೆ. ಆರ್ಥಿಕ ಸ್ವಾತಂತ್ರ್ಯಕ್ಕಿಂತ ಹೆಚ್ಚಾಗಿ ಶಿಕ್ಷಣದ ಮೂಲಕ ಮಹಿಳೆಯರಲ್ಲಿ ಧೈರ್ಯ ಮತ್ತು ವಿಶ್ವಾಸವನ್ನು ತುಂಬುವ ಕೆಲಸ ಆಗಬೇಕು ಎಂದು ಅವರು ಹೇಳಿದರು.
ಯಶಸ್ವಿ ಜೀವನಕ್ಕಾಗಿ ಪ್ರತಿಯೊಬ್ಬ ಮಹಿಳೆ ” ಸಮಾಜದಲ್ಲಿ ನಾನು ಸ್ತ್ರಿ ಎನ್ನುವ ಅನುಕಂಪ ಆಧಾರಿತ ಅಂಶವನ್ನು ಬಳಸಬಾರದು” “ಯಾವಾಗಲೂ ಗುಂಪಿನಲ್ಲಿ ಕೆಲಸ ಮಾಡುವುದನ್ನು ರೂಡಿಸಿಕೊಳ್ಳಬೇಕು” “ಪ್ರತಿದಿನ ಹೊಸದನ್ನು ಕಲಿಯಬೇಕು” ಹಾಗೂ “ಇತರರ ಅನಗತ್ಯ ವಿಷ್ಯಗಳ ಮೇಲೆ ಸಮಯ ವ್ಯರ್ಥ ಮಾಡಬಾರದು” ಎಂದು ಹೇಳಿದರು.
ಕುಲಪತಿ ಪ್ರೊ.ಕರಿಸಿದ್ದಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿ ತಾ ವಿ ಕುಲಸಚಿವ ಪ್ರೊ.ಎ.ಎಸ್.ದೇಶಪಾಂಡೆ ಸ್ವಾಗತಿಸಿದರು, ಹಣಕಾಸು ಅಧಿಕಾರಿ ಎಂ. ಎ. ಸಪ್ನಾ ವಂದಿಸಿದರು.
ಈ ಸಂದರ್ಭದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ. ಸತೀಶ್ ಅಣ್ಣಿಗೇರಿ ಹಾಗೂ ಅಸ್ಪೈರ್ ತಂಡದ ಅಂತರರಾಷ್ಟ್ರೀಯ ಖ್ಯಾತಿಯ ಮಹಿಳಾ ತಜ್ಞರು ಹಾಜರಿದ್ದರು ವಿ ತಾ ವಿ ಮಹಿಳಾ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ.ದೀಪ್ತಿ ಶೆಟ್ಟಿ ಅವರು ನಿರೂಪಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ