Latest
ಯಲ್ಲಮ್ಮ ಜಾತ್ರೆಗೆ ವಿಶೇಷ ಬಸ್ ವ್ಯವಸ್ಥೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಫೆ.೧೧ ರಿಂದ ಮಾರ್ಚ್ ೧ ರವರೆಗೆ ಜರುಗಲಿರುವ ಸವದತ್ತಿ ಯಲ್ಲಮ್ಮ ಜಾತ್ರೆಗೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಚಿಕ್ಕೋಡಿಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಘಟಕದಿಂದ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಚಿಕ್ಕೋಡಿ, ಗೋಕಾಕ, ನಿಪ್ಪಾಣಿ, ಘಟಪ್ರಭಾ, ಅಥಣಿ, ಕಾಗವಾಡ, ರಾಯಬಾಗ ಮುಂತಾದ ಸ್ಥಳಗಳಿಂದ ಸವದತ್ತಿ ಹಾಗೂ ಜೋಗುಳಬಾವಿಗೆ ವಿಶೇಷ ಬಸ್ಗಳ ಕಾರ್ಯಾಚರಣೆ ಹಾಗೂ ಪ್ರಾಸಂಗಿಕ ಕರಾರಿನ ಮೇಲೆ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ವಾಕರಸಾ ಸಂಸ್ಥೆ ಚಿಕ್ಕೋಡಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




