Karnataka NewsLatest

*ಜವರಾಯನ ಅಟ್ಟಹಾಸ: ಅಪಘಾತದಲ್ಲಿ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ:  ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಬಳಿ ಘಟನೆ ನಡೆದಿದೆ.

ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬುವವರು ಸ್ಥಳದಲ್ಲಿ ಸಾವನಪ್ಪಿದ್ದಾರೆ.

Home add -Advt

ಮೃತರೆಲ್ಲರೂ ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಬ್ಬಾಳು ಗ್ರಾಮದಲ್ಲಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಅಪಘಾತ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button