Kannada NewsKarnataka News

ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: 2022-23ನೇ ಸಾಲಿಗೆ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಾದ IIM, IIT, IISc, IIITs, NITs, IISERs, AIIMS, NLU, ISM, IIP, ISI, JIPMER, SPA  ಗಳಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಜನವರಿ 30, 2023 ಸಂಜೆ 5 ಗಂಟೆಯವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್ ಸೈಟ್ ವಿಳಾಸ: https://bcwd.karnataka.gov.in ನ್ನು ನೋಡಬಹುದು ಅಥವಾ ಸಹಾಯವಾಣಿ ಸಂಖ್ಯೆ: 8050770004ನ್ನು ಸಂಪರ್ಕಿಸಬಹುದು ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ಇಬ್ಬರು ಖತರ್ನಾಕ್ ಕಳ್ಳರನ್ನು ಹೆಡೆಮುರಿಕಟ್ಟಿದ ಬೆಳಗಾವಿ ಪೊಲೀಸರು*

https://pragati.taskdun.com/belagavi-police-arrested-2-thieves/

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button