
ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಮಾಜಿ ಸಚೇತಕ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿದೆ.
ಈ ಕುರಿತು ಕುರಿತು ನಂದಗಡ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಿಸಲಾದೆ.

ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಲಿಂಗಾಯತ ಸಮಾಜದ 500 ಕ್ಕೂ ಹೆಚ್ಷು ಮುಖಂಡರನ್ನು ಸೇರಿಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದರು. ಆದರೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದರು. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವ ಕಾರಣ ಚುನಾವಣೆಯ ನೀತಿ ಸಂಹಿತೆ ಪಾಲನೆಯ ಅಧಿಕಾರಿ ರಾಜೇಂದ್ರ ಅವರು ದೂರು ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ