
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ.
ಶಿವಾಜಿ ನಗರದಲ್ಲಿರುವ ಜಮೀರ್ ಅಹ್ಮದ್ ಮನೆ ಹಾಗೂ ಅವರ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಸಂಜಯ ನಗರದಲ್ಲಿರುವ ಅವರ ಮಗಳ ಮನೆ ಮೇಲೂ ದಾಳಿ ನಡೆಸಲಾಗಿದೆ.
ಐಎಂಎ ಹಗರಣದಲ್ಲಿ 400 ಕೋಟಿ ರೂ. ಪಡೆದಿದ್ದಾರೆ ಎನ್ನುವ ಆರೋಪ ಎದುರಿಸುತ್ತಿರುವ ಜಮೀರ್ ಅಹ್ಮದ್ ಈ ಹಿಂದೆ ಬಂಧನಕ್ಕೊಳಗಾಗಿದ್ದರು. ಅವರು ನಿರ್ಮಿಸಿರುವ ಮನೆ ನೂರಾರು ಕೋಟಿ ರೂ ಬೆಲೆಬಾಳುವಂತಿದೆ.
ಐಎಂಎ ಹಗರಣದ ಕುರಿತು ಈಗಾಗಲೆ ಸಿಬಿಐ ತನಿಖೆ ನಡೆಯುತ್ತಿದೆ.
ಕಳೆದ 2 ದಶಕದಲ್ಲಿ ಜಾರಕಿಹೊಳಿ ಕುಟುಂಬವನ್ನು ಹೊರಗಿಟ್ಟಿದ್ದು ಇದೇ ಮೊದಲು
ಪಾದರಾಯನಪುರ ಗಲಾಟೆ: ಜಮೀರ್ ಯಾವನ್ರೀ? ಸಿಎಂ ಹಿಗ್ಗಾಮುಗ್ಗಾ ತರಾಟೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ