LatestNational

ಕಬ್ಬು ಬೆಳೆಯ ಎಫ್‌ಆರ್‌ಪಿ ಹೆಚ್ಚಳ


ಕೇಂದ್ರದ ಕ್ರಮ ಸ್ವಾಗತಾರ್ಹ- ಸಂಸದ ಈರಣ್ಣ ಕಡಾಡಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ೨೦೨೪ರ ಅಕ್ಟೋಂಬರ್ ೧ ರಿಂದ ೨೦೨೫ ಸೆಪ್ಟಂಬರ್ ೩೦ರ ಮುಂಬರುವ ಹಂಗಾಮಿನಲ್ಲಿ ಕಬ್ಬು ಬೆಳೆಗಾರರಿಗೆ ಎಫ್‌ಆರ್‌ಪಿ ದರವನ್ನು ಪ್ರತಿ ಟನ್‌ಗೆ ೨೫೦ ರೂ ಹೆಚ್ಚಳಕ್ಕೆ ಅನುಮೋದನೆ ನೀಡಿ ಕಬ್ಬು ಬೆಳೆಗಾರರಿಗೆ ಭರ್ಜರಿ ಉಡುಗೊರೆ ನೀಡಿದೆ ಎಂದು ಈರಣ್ಣ ಕಡಾಡಿ ತಿಳಿಸಿದ್ದಾರೆ.

೨೦೧೪ ರಲ್ಲಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಬ್ಬಿಗೆ ಘೋಷಿಸಿದ ಅತ್ಯಧಿಕ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆಯಾಗಿದೆ. ೨೦೧೪-೧೫ನೇ ಸಾಲಿನಲ್ಲಿ ಪ್ರತಿ ಟನ್ ಗೆ ೨೧೦೦ ರೂ. ಇದ್ದ ಎಫ್‌ಆರ್‌ಪಿ ದರವನ್ನು ೨೦೨೪-೨೫ನೇ ಸಾಲಿನಲ್ಲಿ ಟನ್ ಗೆ ೩೪೦೦ ರೂ.ಗೆ ಏರಿಕೆಯಾಗಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ೫ ಕೋಟಿಗೂ ಹೆಚ್ಚು ಕಬ್ಬು ಬೆಳಗಾರರಿಗೆ ಮತ್ತು ಸಕ್ಕರೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಲಕ್ಷಾಂತರ ಜನರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button