Latest

ಸುಗ್ರೀವಾಜ್ಞೆ ಮೂಲಕ SC,ST ಮೀಸಲಾತಿ ಹೆಚ್ಚಳ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳವನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಮಾಧುಸ್ವಾಮಿ, ಎಸ್ ಸಿ ಸಮುದಾಯದಲ್ಲಿ 103 ಜಾತಿಗಳಿವೆ, ಎಸ್ ಟಿ ಸಮುದಾಯದಲ್ಲಿ 56 ಜಾತಿಗಳಿವೆ. ಸುಗ್ರೀವಾಜ್ಞೆ ಮೂಲಕ ಮೀಸಲಾತಿ ಹೆಚ್ಚಳಕ್ಕೆ ಸಂಪುಟ ಸಭೆ ಸಮ್ಮತಿಸಿದೆ ಎಂದರು.

ಈ ಮೊದಲು ಆಡಳಿತಾತ್ಮಕ ಆದೇಶಕ್ಕೆ ರಾಜ್ಯ ಸರ್ಕಾರ ತೀರ್ಮಾನಿಸಿತ್ತು. ಈಗ ಕಾನೂನು ಪರಿಮಿತಿಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂದನೆಯಾಗಲಿದೆ ಎಂದರು.

ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗಿದ್ದು, ಮಳೆಗಾಲುವೆ ನಿರ್ಮಾಣಕ್ಕೆ ಬಿಬಿಎಂಪಿಗೆ 1,500 ಕೋಟಿ ನೀಡಲು ಸಂಪುಟ ಸಭೆ ಒಪ್ಪಿದೆ ಎಂದು ತಿಳಿಸಿದರು.

90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್‍ಫಾರಂ ವಾಹನ ಲೋಕಾರ್ಪಣೆ

https://pragati.taskdun.com/politics/karnataka-state-fire-and-emergency-services-inauguration-of-90-meter-aerial-ladder-platform-vehiclecm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button