Kannada NewsKarnataka NewsLatest

*ಪಥಸಂಚಲನದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದ ಮೂವರು ವಿದ್ಯಾರ್ಥಿಗಳು*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ದೇಶದಾದ್ಯಂತ 77ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಧ್ವಜಾರೋಹಣ ನೆರವೇರಿಸಲಾಗುತ್ತಿದೆ. ಈ ವೇಳೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಪಥಸಂಚಲನದ ವೇಳೆ ಅವಘಡ ಸಂಭವಿಸಿದೆ.

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಧ್ವಜಾರೋಹನ ನೆರವೇರಿದ್ದರು. ಬಳಿಕ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆದಿದ್ದು, ಈ ವೇಳೆ ಮೂವರು ವಿದ್ಯಾರ್ಥಿಗಳು ಕುಸಿದು ಬಿದ್ದಿದ್ದಾರೆ.

Home add -Advt

ಪಥಸಂಚಲನ ದಳದಲ್ಲಿ ನಗರದ ಆದರ್ಶ ಶಾಲೆಯ ವಿದಾರ್ಥಿಗಳು ಪಾಲ್ಗೊಂಡಿದ್ದರು. ಪಥಸಂಚಲನ ಇನ್ನೇನು ಮುಗಿಯುವ ಹಂತದಲ್ಲಿತ್ತು. ಈ ವೇಳೆ ಮೂವರು ವಿದ್ಯಾರ್ಥಿಗಳು ಇದ್ದಕಿದ್ದಂತೆ ಕುಸಿದು ಬಿದ್ದಿದ್ದಾರೆ. ತಕ್ಷಣ ಪೊಲೀಸರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳಿಗೆ ಗ್ಲುಕೋಸ್ ನೀಡಿ ಆರೈಕೆ ಮಾಡಿದ್ದಾರೆ. ಸಧ್ಯ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಉಪಹಾರಸೇವಿಸದೇ ಬಂದಿದ್ದರಿಂದ ಸುಸ್ತಾಗಿ ವಿದ್ಯಾರ್ಥಿಗಳು ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

Related Articles

Back to top button