Karnataka NewsLatestPolitics

*BREAKING: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಯಶವಂತರಾಯಗೌಡ*

ಪ್ರಗತಿವಾಹಿನಿ ಸುದ್ದಿ: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರವಾಗಿ ಮನನೊಂದ ಇಂಡಿ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಚಿವ ಸ್ಥಾನ ಸ್ಥಾನ ಸಿಗದಿದ್ದಕ್ಕೆ ಸಚಿವಾಕಾಂಕ್ಷಿಗಳಲ್ಲಿ ಅಸಮಾಧಾನ ಭುಗಿಲೆದ್ದಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಅಸಮಾಧಾನ ವ್ಯಕ್ತವಾಗುತ್ತಿದ್ದು, ಹಲವು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ.

ಸಚಿವ ಸ್ಥಾನ ಸಿಗದಿದ್ದಕ್ಕೆ ತೀವ್ರವಾಗಿ ಬೇಸರ ವ್ಯಕ್ತಪಡಿಸಿದ್ದ ಶಾಸಕ ಯಶವಂತರಾಯಗೌಡ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಯಶವಂತರಾಯಗೌಡ ಬೆನ್ನಲ್ಲೇ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ನಾಳೆ ಬೆಳಿಗ್ಗೆ 10 ಗಂಟೆಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಹಲವು ಶಾಸಕರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button