Kannada NewsKarnataka NewsPolitics

*ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಬರ ಪೀಡಿತ ತಾಲೂಕುಗಳ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬರಗಾಲ ಪೀಡಿತ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡು ಶಾಸಕ ಯಶವಂತರಾಯಗೌಡ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಹಲವು ಬಾರಿ ಮನವಿ ಮಾಡಿದರೂ ಇಂಡಿ ಹಾಗೂ ಚಡಚಣ ತಾಲೂಕು ಬರ ಘೋಷಣೆ ಮಾಡಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರಗೊಂಡು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

Related Articles

Back to top button