Latest

ಮಳೆ ಅಬ್ಬರದ ನಡುವೆಯೇ ಮತ್ತೆ ವ್ಯಾಪಕವಾಗಿ ಹರಡುತ್ತಿದೆ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಳೆ ಅಬ್ಬರದ ನಡುವೆಯೇ ದೇಶಾದ್ಯಂತ ಕೊರೊನಾ ಸೋಂಕು ಮತ್ತೆ ವ್ಯಾಪಕವಾಗಿ ಹರಡುತ್ತಿದ್ದು, ಕಳೆದ ಒಂದು ದಿನದಲ್ಲಿ 8,582 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸೋಕಿತರ ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಒಂದು ದಿನದಲ್ಲಿ 4 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 524761ಕ್ಕೆ ಏರಿಕೆಯಾಗಿದೆ.

44513 ಕೋವಿಡ್ ಸಕ್ರಿಯ ಪ್ರಕರಣಗಳು ದಾಖಲಾಗಿದ್ದು, 24 ಗಂಟೆಯಲ್ಲಿ 4435 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 1,95,07,08,541 ಡೋಸ್ ಲಸಿಕೆ ಹಾಕಲಾಗಿದೆ. ಕಳೆದ 24 ಗಂಟೆಯಲ್ಲಿ 3,16,179 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಶೇ.1.1ರಷ್ಟಿದ್ದ ಪಾಸಿಟಿವಿಟಿ ಪ್ರಮಾಣ ಇದೀಗ ಶೇ.2.9ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೇ ಕಳೆದ ಒಂದು ದಿನದಲ್ಲಿ 400ಕ್ಕೂ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗಿದೆ.

ಕೈಗಾ ಅಣು ವಿದ್ಯುತ್ ಸ್ಥಾವರದ ನಿರ್ದೇಶಕರಿಗೆ 3 ಲಕ್ಷ ರೂ. ವಂಚನೆ: ವಿಮಾನದ ಟಿಕೇಟ್ ರದ್ದುಪಡಿಸಲು ಹೋಗಿ ಆಯ್ತು ಯಡವಟ್ಟು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button