National

*ನಾಳೆ ಮಾಕ್ ಡ್ರಿಲ್: ದೇಶಾದ್ಯಂತ ಮೊಳಗಲಿದೆ ಯುದ್ಧದ ಸೈರನ್*

244 ಜಿಲ್ಲೆಗಳಲ್ಲಿ ವಿದ್ಯುತ್ ದೀಪ ಬಂದ್: ಯುದ್ಧದ ವೇಳೆ ಜನರ ರಕ್ಷಣೆಯ ಅಣಕು ಪ್ರದರ್ಶನ

ಪ್ರಗತಿವಾಹಿನಿ ಸುದ್ದಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗಿದ್ದು, ಪಾಕ್ ವಿರುದ್ಧ ಭಾರತ ಯುದ್ಧದ ತಯಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ನಾಳೆ ದೇಶಾದ್ಯಂತ ಮಾಕ್ ಡ್ರಿಲ್ ನಡೆಯಲಿದ್ದು, ಯುದ್ಧದ ಸಂದರ್ಭದಲ್ಲಿ ಜನರನ್ನು ಯಾವ ರೀತಿ ರಕ್ಷಣೆ ಮಾಡಬೇಕು? ಉಗ್ರರನ್ನು ಹೇಗೆ ಸದೆಬಡಿಯಬೇಕು ಎಂಬ ಬಗ್ಗೆ ಅಣುಕು ಪ್ರದರ್ಶನ ನಡೆಯಲಿದೆ.

ದೇಶಾದ್ಯಂತ ನಾಳೆ ಯುದ್ಧದ ಸೈರನ್ ಮೊಳಗಲಿದೆ. ಬರೋಬ್ಬರಿ 54 ವರ್ಷಗಳ ಬಳಿಕ ಭಾರತದಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ಪಹಲ್ಗಾಮ್ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳಲು ಭಾರತ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ದೇಶದ 244 ಸಿವಿಲ್ ಡಿಫೆನ್ಸ್ ಜಿಲ್ಲೆಗಳಲ್ಲಿ ನಾಳೆ ನಾಗರಿಕರ ರಕ್ಷಣೆ ಸಂಬಂಧ ಭದ್ರತಾ ತಾಲೀಮು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ.

ಯುದ್ಧದ ಸಂದರ್ಭದಲ್ಲಿ ಜನರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಬಗ್ಗೆ ಅಣುಕು ತಾಲೀಮು ನಡೆಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳು, ನಾಗರಿಕರು, ರಕ್ಷಣೆಗಾಗಿ ಪ್ರಾತ್ಯಕ್ಷಿಕೆ ಕೊಡುವಂತೆ ಸಿವಿಲ್ ಡಿಫೆನ್ಸ್ ಗಳಿಗೆ ಸೂಚಿಸಲಾಗಿದೆ.

1971ರಲ್ಲಿ ಭಾರತ-ಪಾಕ್ ಯುದ್ಧ ನಡೆಯುವ ಮೊದಲು ರಕ್ಷಣಾ ಮಾಕ್ ಡ್ರಿಲ್ ನಡೆದಿತ್ತು. ಕಳೆದ ವಾರ ಪಂಜಾಬ್ ನ ಫಿರೋಜ್ ಪುರ ಕಂಟೋನ್ಮೆಂಟ್ ನಲ್ಲಿ ರಾತ್ರಿ 9ರಿಂದ 9:30ರವರೆಗೆ ವಿದ್ಯುತ್ ದೀಪ ಆರಿಸಿ ಮಾಕ್ ಡ್ರಿಲ್ ನಡೆಸಲಾಗಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button