
ಪ್ರಗತಿವಾಹಿನಿ ಸುದ್ದಿ: ಮತಗಳ್ಳತನ ಪ್ರಕರಣ ಖಂಡಿಸಿ ಇಂಡಿಯಾ ಮೈತ್ರಿಕೂಟ ಸಂಸದರು ಸಂಸತ್ ನಿಂದ ಕೇಂದ್ರ ಚುನಾವಣ ಆಯೋಗದ ಕಚೇರಿವರೆಗೂ ಪ್ರತಿಭಟನೆ ನಡೆಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.
ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಚುನಾವಣಾ ಆಯೋಗದ ಕಚೇರಿಯತ್ತ ಪ್ರತಿಭಟನ ಅಮೆರವಣಿಗೆ ಸಾಗುತ್ತಿದ್ದಂತೆ ಪೊಲೀಸರು ಪ್ರತಿಭಟನೆಗೆ ಅನುಮತಿ ಪಡೆದಿಲ್ಲ ಎಂಬ ಕಾರಣ ನೀಡಿ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ರ್ಯಾಲಿ ತಡೆದಿದ್ದಾರೆ.
ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಬ್ಯಾರಿಕೇಡ್ ಗಳನ್ನು ಹಾರಿ ಮುನ್ನುಗ್ಗಿದ್ದಾರೆ. ಪ್ರತಿಭಟನಾಕಾರರನ್ನು ಅರ್ಧಕ್ಕೆ ತಡೆದ ಪೊಲೀಸರು ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರಿಯಾಂಕಾ ಗಾಂಧಿ ಬಸ್ ನೊಳಗೆ ಕುಳಿತು ಪ್ರಿಯಾಂಕಾ ಗಾಂಧಿ ಪ್ರತಿಭಟನೆ ನಡೆಸಿದರು.