Kannada NewsKarnataka NewsNationalSportsWorld

*8 ವರ್ಷಗಳ ಬಳಿಕ ಏಷ್ಯಾಕಪ್ ಹಾಕಿ ಟೂರ್ನಿ ಗೆದ್ದ ಭಾರತ*

ಪ್ರಗತಿವಾಹಿನಿ ಸುದ್ದಿ: ಏಷ್ಯಾಕಪ್ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಹಾಲಿ ಚಾಂಪಿಯನ್ ದಕ್ಷಿಣ ಕೊರಿಯಾವನ್ನು ಮಣಿಸಿ 8 ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರಿದೆ.

ಬಿಹಾರದ ರಾಜ್‌ಗಿರ್‌ನಲ್ಲಿ ನಡೆದ 2025 ರ ಹಾಕಿ ಏಷ್ಯಾಕಪ್ ಫೈನಲ್​ನಲ್ಲಿ ಹರ್ಮನ್​​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡವು, ದಕ್ಷಿಣ ಕೊರಿಯಾ ತಂಡವನ್ನು 4-1 ಗೋಲುಗಳಿಂದ ಮಣಿಸಿ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಟೂರ್ನಿಯಲ್ಲಿ ಅಜೇಯ ತಂಡವಾಗಿ ಫೈನಲ್​ ಪ್ರವೇಶಿಸಿದ್ದ ಭಾರತ ತಂಡ 8 ವರ್ಷಗಳ ಬಳಿಕ ನಾಲ್ಕನೇ ಬಾರಿಗೆ ಏಷ್ಯಾಕಪ್ ಗೆದ್ದ ಸಾಧನೆ ಮಾಡಿದೆ.

ಟೀಂ ಇಂಡಿಯಾ ಕೊನೆಯ ಬಾರಿಗೆ 8 ವರ್ಷಗಳ ಹಿಂದೆ ಅಂದರೆ 2017 ರಲ್ಲಿ ಪ್ರಶಸ್ತಿ ಗೆದ್ದಿತ್ತು. ಈ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡವಾಗಿರುವ ದಕ್ಷಿಣ ಕೊರಿಯಾ 5 ಬಾರಿ ಟ್ರೋಫಿ ಎತ್ತಿ ಹಿಡಿದಿದೆ. 

Home add -Advt

ಇದಕ್ಕೂ ಮೊದಲು, ಉಭಯ ದೇಶಗಳ ನಡುವೆ 3 ಫೈನಲ್‌ಗಳು ನಡೆದಿದ್ದು, ಅದರಲ್ಲಿ 2 ರಲ್ಲಿ ದಕ್ಷಿಣ ಕೊರಿಯಾ ಮತ್ತು ಒಂದು ಪಂದ್ಯದಲ್ಲಿ ಭಾರತ ಜಯಗಳಿಸಿದೆ. ಈ ಗೆಲುವಿನೊಂದಿಗೆ, ಭಾರತ ತಂಡ ನೆದರ್ಲ್ಯಾಂಡ್ಸ್ ಮತ್ತು ಬೆಲ್ಜಿಯಂನಲ್ಲಿ ನಡೆಯಲಿರುವ 2026 ರ FIH ಪುರುಷರ ವಿಶ್ವಕಪ್​ಗೆ ನೇರವಾಗಿ ಅರ್ಹತೆ ಪಡೆದುಕೊಂಡಿದೆ.

Related Articles

Back to top button