ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಈಗ ಎದುರಾಗಿರುವ ಕೊರಿನಾ ಸೋಂಕಿನ ಬಿಕ್ಕಟ್ಟಿನಿಂದ ನಾವು ಹೊರಬರಲಿದ್ದೇವೆ. ಭಾರತದಲ್ಲಿ ಲಾಕ್ ಡೌನ್ ತೆರವುಗೊಳಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಾನು ಭಾರತದ ತಂತ್ರಜ್ಞಾನ ಮತ್ತು ಆವಿಷ್ಕಾರವನ್ನು ನಂಬುತ್ತೇನೆ. ನಾನು ರೈತರು, ಸಣ್ಣ ಕೈಗಾರಿಕೆಗಳು ಮತ್ತು ಉದ್ಯಮಿಗಳನ್ನು ನಂಬುತ್ತೇನೆ. ಭಾರತವು ಮರಳಿ ತನ್ನ ಅಭಿವೃದ್ಧಿಯನ್ನು ಸಾಧಿಸಲಿದೆ ಎಂಬ ನಂಬಿಕೆಯಿದೆ ಎಂದರು.
ದೇಶದ ಆರ್ಥಿಕತೆಯನ್ನು ಮತ್ತೆ ಬಲಪಡಿಸುವುದು ನಮ್ಮ ಮೊದಲ ಆದ್ಯತೆಗಳಲ್ಲಿ ಒಂದಾಗಿದೆ. ಇದಕ್ಕಾಗಿ ಸರ್ಕಾರ ತಕ್ಷಣದ ನಿರ್ಧಾರಗಳನ್ನು ತೆಗೆದುಕೊಂಡಿದೆ. ನಾವು ದೀರ್ಘಾವಧಿಯಲ್ಲಿ ದೇಶಕ್ಕೆ ಸಹಾಯ ಮಾಡುವ ನಿರ್ಧಾರಗಳನ್ನು ಸಹ ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ಮಧ್ಯವರ್ತಿಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಯತ್ನಿಸಿದ್ದೇವೆ. ಸ್ವಾತಂತ್ರ್ಯೋತ್ತರದ ಕಾನೂನುಗಳು ರೈತರನ್ನು ಮಧ್ಯವರ್ತಿಗಳ ಕೈಯಲ್ಲಿ ಸಿಲುಕಿಸಿಬಿಟ್ತಿದ್ದವು. ಎಪಿಎಂಸಿ ಕಾಯ್ದೆಯಲ್ಲಿ ನಾವು ಮಹತ್ವದ ಬದಲಾವಣೆಗಳನ್ನು ತರುವ ಮೂಲಕ ನಾವು ಮಧ್ಯವರ್ತಿಗಳ ಕೈಯಿಂದ ರೈತರನ್ನು ರಕ್ಷಿಸಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ