Latest

ಹೆಲಿಕಾಪ್ಟರ್ ಪತನ ಪ್ರಕರಣ; ಓರ್ವ ಪೈಲಟ್ ಸಾವು

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಭಾರತೀಯ ಸೇನಾ ಚೀತಾ ಹೆಲಿಕಾಪ್ಟರ್ ದುರಂತ ಪ್ರಕರಣದಲ್ಲಿ ಓರ್ವ ಪೈಲಟ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಗುರೇಜ್ ಸೆಕ್ಟರ್ ನಲ್ಲಿ ಮಧ್ಯಾಹ್ನ ಸಂಭವಿಸಿದ್ದ ಚೀತಾ ಹೆಲಿಕಾಪ್ಟರ್ ಪತನದಲ್ಲಿ ಓರ್ವ ಪೈಲಟ್ ಸಾವನ್ನಪ್ಪಿದ್ದು, ಸಹ ಪೈಲಟ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡಿದ್ದ ಬಿಎಸ್ ಎಫ್ ಸಿಬ್ಬಂದಿಯನ್ನು ಕರೆತರುವ ನಿಟ್ಟಿನಲ್ಲಿ ತೆರಳುತ್ತಿದ್ದ ಭಾರತ್ಯ ಸೇನಾ ಚೀತಾ ಹೆಲಿಕಾಪ್ಟರ್ ಗುರೆಜ್ ಸೆಕ್ಟರ್ ನಲ್ಲಿ ಪತನಗೊಂಡಿತ್ತು. ಹೆಲಿಕಾಪ್ಟರ್ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ಪತನ

Related Articles

Back to top button