ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತೀಯ ಸೇನೆಯ ಮತ್ತೊಂದು ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿರುವ ಘಟನೆ ನಡೆದಿದೆ.
ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ್ ಪ್ರಾದೇಶದಲ್ಲಿ ಪನಗೊಂಡಿದೆ. ಪೈಲಟ್ ಗಾಗಿ ಶೋಧ ನಡೆಸಲಾಗುತ್ತಿದೆ.
ಬೆಳಿಗ್ಗೆ ಹಾರಾಟ ನಡೆಸಿದ್ದ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಬಳಿಯ ಬೊಮ್ದಿಲ ಪ್ರದೇಶದಿಂದ ಸಂಪರ್ಕ ಕಳೆದುಕೊಂಡಿದ್ದು, ಬಳಿಕ ಪತನಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ