ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಚೀನಾದ ಆಕ್ರಮಣವನ್ನು ತಡೆಯಲು ಭಾರತೀಯ ಸೇನೆಗೆ ಮುಕ್ತ ಸ್ವಾತಂತ್ರ್ಯ ನೀಡಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಿಲಿಟರಿ ಪಡೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ, ನೌಕಾ ಪಡೆ ಮುಖ್ಯಸ್ಥ ಅಡ್ವಿರಲ್ ಕರಂಬೀರ್ ಸಿಂಗ್ ಮತ್ತು ವಾಯುಪಡೆ ಮುಖ್ಯಸ್ಥ ಮಾರ್ಷಲ್ ಆರ್.ಕೆ.ಎಸ್. ಭದೂರಿಯಾ ಅವರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಭೂ ಗಡಿಭಾಗದಲ್ಲಿ, ವಾಯು ಸೀಮೆ, ಸಮುದ್ರ ಮಾರ್ಗಗಳಲ್ಲಿ ಚೀನೀಯರ ಚಟುವಟಿಕೆ ಮೇಲೆ ಹದ್ದಿನ ಕಣ್ಣಿಟ್ಟಿರಬೇಕು. ಚೀನೀ ಪಡೆಗಳು ಯಾವುದೇ ಕುಕೃತ್ಯಕ್ಕೆ ಮುಂದಾದರೂ ಕಠಿಣ ಕ್ರಮ ಅನುಸರಿಸಿ ಎಂದು ಗೃಹ ಮಂತ್ರಿ ರಾಜನಾಥ್ ಸಿಂಗ್ ಅವರು ಮಿಲಟರಿ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
ಲಡಾಖ್ ಗಡಿಭಾಗದಲ್ಲಿ ಚೀನೀ ಸೈನಿಕರು ಭಾರತದ ಭಾಗವನ್ನು ಅತಿಕ್ರಮಣ ಮಾಡಲು ಯತ್ನಿಸಿದರು. ಭಾರತೀಯ ಸೇನಾ ಪಡೆಯ ಪ್ರತಿರೋಧದಿಂದ ಅವರ ಯತ್ನ ವಿಫಲವಾಗಿದೆ. ಇದೇ ವೇಳೆ, ಚೀನೀ ಸೈನಿಕರ ದಾಳಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ