Kannada NewsKarnataka NewsLatestNational
*ರಾಜ್ಯದ ಮೇಜರ್ ಸ್ವಾತಿ ಶಾಂತ ಕುಮಾರ್ ಗೆ ವಿಶ್ವಸಂಸ್ಥೆಯ ಪ್ರಶಸ್ತಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಸೇನಾಧಿಕಾರಿ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಶ್ವಸಂಸ್ಥೆಯ ಪ್ರಧಾನಕಾರ್ಯದರ್ಶಿ ನೀಡುವ ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿ-2025ಕ್ಕೆ ಮೇಜರ್ ಸ್ವಾತಿ ಶಾಂತಕುಮಾರ್ ಭಾಜನರಾಗಿದ್ದಾರೆ.
ವಿವಿಧ ಕಾರ್ಯಾಚರಣೆಯಲ್ಲಿನ ಶ್ರೇಷ್ಠ ಸೇವೆಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರ್ ಘೋಷಿಸಿದ್ದು ಸಂಘರ್ಷ ಪೀಡಿತ ದಕ್ಷಿಣ ಸೂಡನ್ ನಲ್ಲಿ ಮಹಿಳೆಯರ ರಕ್ಷಣೆ ಸಮುದಾಯ ನೆಮ್ಮದಿಗೆ ಕೈಗೊಂಡ ಸಂವೇದನಾಶೀಲ ಕ್ರಮಗಳಿಗಾಗಿ ಸ್ವಾತಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಸಮಾನ ಪಾಲುದಾರಿಕೆ-ಶಾಶ್ವತ ಶಾಂತಿ ಎಂಬುದು ಅವರ ಧ್ಯೇಯವಾಗಿದ್ದು, ಶಾಂತಿ ರಕ್ಷಣಾ ಕಾರ್ಯಾಚರಣೆಗಳ ಮುಂದಾಳತ್ವದಲ್ಲಿ ಲಿಂಗ ಸಮಾನತೆಗೆ ಒತ್ತು ನೀಡಿದ್ದಾರೆ.




