ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸುಳ್ಳು ಸುದ್ದಿಯನ್ನು ಹರಡಿಸುತ್ತಿದ್ದ 22 ಯೂಟ್ಯೂಬ್ ಚಾನಲ್ ಗಳನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿ ಕ್ರಮ ಕೈಗೊಂಡಿದೆ.
ರಾಷ್ಟ್ರೀಯ ಭದ್ರತೆ ಕುರಿತು ತಪ್ಪು ಮಾಹಿತಿಯನ್ನು ಪ್ರಸಾರ ಮಾಡುತ್ತಿದ್ದ ಹಿನ್ನೆಲೆಯಲ್ಲಿ 18 ಭಾರತೀಯ, 4 ಪಾಕಿಸ್ತಾನ ಯೂಟ್ಯೂಬ್ ಚಾನಲ್, 3 ಟ್ವಿಟರ್ ಖಾತೆ, 1 ಫೇಸ್ ಬುಕ್ ಹಾಗೂ ಒಂದು ಸುದ್ದಿ ವೆಬ್ ಸೈಟ್ ಕೂಡ ನಿಷೇಧಿತ ಯೂಟ್ಯೂಬ್ ಚಾನಲ್ ನಲ್ಲಿ ಸೇರಿದೆ.
ಸುಳ್ಳು ಸುದ್ದಿಗಳನ್ನು ಬಿತ್ತರಿಸುವ ಮೂಲಕ ವೀಕ್ಷಕರ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿತ್ತು. ರಾಷ್ಟ್ರೀಯ ಭದ್ರಎ, ಭಾರತದ ವಿದೇಶಿ ಸಂಬಂಧಗಳು ಹಾಗೂ ಸಾರ್ವಜನಿಕ ಸುವ್ಯವಸ್ಥೆ ದೃಷ್ಟಿಯಿಂದ ಸೂಕ್ಷ ವಿಷಯಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಇವುಗಳು ತಪ್ಪು ಮಾಹಿತಿ ಹರಡುತ್ತಿದ್ದವು. ಈ ಹಿನ್ನೆಲೆಯಲ್ಲಿ 22 ಯೂಟ್ಯೂಬ್ ಚಾನಲ್ ಗಳನ್ನು ನಿರ್ಬಂಧಿಸಲಾಗಿದೆ ಎಂದು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಖಾತೆ ತಿಳಿಸಿದೆ.
ಕಾಲೇಜು ಬೋಧಕ/ಬೋಧಕೆತರ ಸಿಬ್ಬಂದಿಗಳ ವರ್ಗಾವಣೆ; ಕೌನ್ಸೆಲಿಂಗ್ ಆದೇಶ ಪ್ರಕಟ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ