
ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ – ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾಸಾಹೇಬ ಜೊಲ್ಲೆ ನಿಪ್ಪಾಣಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬೇಡಕಿಹಾಳ ಮತ್ತು ಭೋಜ ಗ್ರಾಮಗಳಿಗೆ ಭೇಟಿ ನೀಡಿ, ಇಲಾಖೆ ಅಧಿಕಾರಿಗಳು, ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರೊಂದಿಗೆ ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಲಾಯಿತು ಹಾಗೂ ಮುನ್ನೆಚ್ಚರಿಗೆ ಕ್ರಮಗಳ ಕುರಿತು ಜನರಿಗೆ ತಿಳಿ ಹೇಳುವಂತೆ ತಿಳಿಸಿದರು.

ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿ ಕೊರೋನಾ ಸಾಂಕ್ರಾಮಿಕ ತಡೆಗಟ್ಟುವಲ್ಲಿ ನಮಸ್ಕಾರದಿಂದ ಪ್ರಾರಂಭವಾಗುವ ಭಾರತೀಯ ಜೀವನ ಪದ್ಧತಿ, ಯೋಗ, ಆಯುರ್ವೇದ ಇತ್ಯಾದಿಗಳು ವಿಶ್ವಕ್ಕೆ ಪಾಠ ಕಲಿಸಿದ್ದು ನಮ್ಮ ದೇಶದ ಹೆಮ್ಮೆಯ ಪ್ರತೀಕವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಕೋವಿಡ್ ವೈರಸ್ ಜೊತೆಯಲ್ಲಿ ನಾವು ಜೀವನ ನಡೆಸಬೇಕಾದ ಅನಿವಾರ್ಯತೆಯ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ, ಸರ್ಕಾರದ ಜೊತೆಯಲ್ಲಿ ಸಾರ್ವಜನಿಕರೂ ಜವಾಬ್ದಾರಿಯಿಂದ ವರ್ತಿಸುವ ಅಗತ್ಯವಿದ್ದು, ಆಪ್ತ ಮಿತ್ರ, ಆರೋಗ್ಯ ಸೇತು ಮೊಬೈಲ್ ಅಪ್ಲಿಕೇಶನ್ ಗಳನ್ನು ಜನರು ಬಳಸುವಂತೆ ಜಾಗೃತಿ ಮೂಡಿಸಲು ಕರೆ ನೀಡಿದರು.
ಈ ಸಂದರ್ಭದಲ್ಲಿ ಸಿಡಿಪಿಓ ಸುಮಿತ್ರಾ ಡಿ.ಬಿ, ಡಾ. ಅರ್ಚನಾ ಕುಲಕರ್ಣಿ,ಸುಜಾತಾ ಖೋತ, ಪವನ ಪಾಟೀಲ, ಹಾಗೂ ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ