Cancer Hospital 2
Bottom Add. 3

*ಭಾರತೀಯ ನೌಕಾಪಡೆ ಹೆಲಿಕಾಪ್ಟರ್ ಪತನ; ಓರ್ವ ಅಧಿಕಾರಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ಒಂದು ಪತನಗೊಂಡು ನೌಕಾಪಡೆಯ ಅಧಿಕಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ.

ಎಂದಿನಂತೆ ತರಬೇತಿ ನಡೆಸುತ್ತಿದ್ದ ಹೆಲಿಕಾಪ್ಟರ್ ಇಂದು ಮಧ್ಯಾಹ್ನ 2:30ರ ಸುಮಾರಿಗೆ ಪತನಗೊಂಡಿದೆ. ಈ ವೇಳೆ ರನ್ ವೇಯಲ್ಲಿದ್ದ ನೌಕಾಪಡೆಯ ಅಧಿಕಾರಿ ಹೆಲಿಕಾಪ್ಟರ್ ನ ರೋಟರ್ ಬ್ಲೇಡ್ ಗಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಕೊಚ್ಚಿಯ ಸೌತ್ ನೇವಲ್ ಕಮಾಂಡ್ ಪ್ರಧಾನ ಕಚೇರಿಯಲ್ಲಿರುವ ಐಎನ್ ಎಸ್ ಗರುಡ ರನ್ ವೇ ಯಲ್ಲಿ ಈ ದುರ್ಘಟನೆ ನಡೆದಿದೆ ಅಪಘಾತದಲ್ಲಿ ಹೆಲಿಕಾಪ್ಟರ್ ನ ಪೈಲಟ್ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Bottom Add3
Bottom Ad 2

You cannot copy content of this page