ಪ್ರಗತಿವಾಹಿನಿ ಸುದ್ದಿ; ಶಿರಸಿ: ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ವೊಂದು ತಾಂತ್ರಿಕ ದೋಷದಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿಯಲ್ಲಿ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಈ ಹೆಲಿಕಾಪ್ಟರ್ ನಲ್ಲಿ 8 ಸಿಬ್ಬಂದಿಗಳಿದ್ದರು. ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತಕ್ಷಣವೇ ತಾಲೂಕಿನ ದಾಸನಕೊಪ್ಪದ ಎಪಿಎಮ್ ಸಿ ಮೈದಾನದಲ್ಲಿ ತುರ್ತಾಗಿ ಲ್ಯಾಂಡ್ ಮಾಡಲಾಗಿದೆ. ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.
ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಅದನ್ನು ನೋಡಲು ಜನ ಮುಗಿ ಬಿದ್ದಿದ್ದು, ಫೋಟೊಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಸ್ಥಳೀಯ ಪೊಲೀಸರು ಜನರನ್ನು ನಿಯಂತ್ರಿಸುವಲ್ಲಿ ನಿರತರಾಗಿದ್ದಾರೆ.
ಗೋವಾದಿಂದ ತಜ್ಞರ ತಂಡವೊಂದು ದಾಸನಕೊಪ್ಪಕ್ಕೆ ಆಗಮಿಸುತ್ತಿದ್ದು, ದೋಷ ಸರಿಪಡಿಸಿದ ಬಳಿಕ ಹೆಲಿಕಾಪ್ಟರ್ ಅನ್ನು ಕೊಂಡೊಯ್ಯಲಾಗುತ್ತದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ