Karnataka NewsLatestPolitics

*ಚೆನ್ನಮ್ಮ ದೇವೇಗೌಡರ ಕುಟುಂಬ ಮಾತ್ರವಲ್ಲ, ನಾಡಿಗೇ ಒಂದು ಶಕ್ತಿ ಆಗಿದ್ದರು; ಪ್ರಲ್ಹಾದ ಜೋಶಿ ಕಂಬನಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರ ಪತ್ನಿ ಹಾಗೂ ಕೇಂದ್ರ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ ಅವರ ಮಾತ್ರೋಶ್ರೀ ಚೆನ್ನಮ್ಮ ದೇವೇಗೌಡ ಅವರ ನಿಧನ ತೀವ್ರ ದುಃಖ ತರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಂಬನಿ ಮಿಡಿದಿದ್ದಾರೆ.

ಚೆನ್ನಮ್ಮ ಅವರು ಆದರ್ಶ ಗೃಹಿಣಿಯಾಗಿ, ಸರಳತೆಯ ಸಾಕಾರ ಮೂರ್ತಿಯಾಗಿದ್ದರು. ದೇವೇಗೌಡರ ಕುಟುಂಬ ಮಾತ್ರವಲ್ಲ, ನಾಡಿಗೆ ಒಂದು ದೊಡ್ಡ ಶಕ್ತಿಯಾಗಿದ್ದರು. ದೇಶದ ಅತ್ಯುನ್ನತ ರಾಜಕೀಯ ಕುಟುಂಬದ ಭಾಗವಾಗಿದ್ದರೂ ಅವರ ನಮ್ರತೆ ಮತ್ತು ಮಮತಾಮಯಿ, ಮಾತೃಹೃದಯದ ವ್ಯಕ್ತಿತ್ವ ಸರ್ವರಿಗೂ ಮಾದರಿಯಾಗಿತ್ತು ಎಂದು ಜೋಶಿ ಸ್ಮರಿಸಿದ್ದಾರೆ.

ಚೆನ್ನಮ್ಮ ಅವರ ಅಗಲಿಕೆಯಿಂದ ದೇವೇಗೌಡರ ಕುಟುಂಬ ಹಾಗೂ ಅಭಿಮಾನಿ ಬಳಗಕ್ಕೆ ಮಹಿಳಾ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಜೋಶಿ ಶೋಕ ವ್ಯಕ್ತಪಡಿಸಿದ್ದಾರೆ.

ಭಗವಂತ ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಗೌರವಾನ್ವಿತ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು, ಮತ್ತವರ ಪುತ್ರರೂ ಆಗಿರುವ ಕೆಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಸೇರಿದಂತೆ ಅವರ ಒಟ್ಟು ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಿದ್ದಾರೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ.

https://www.facebook.com/share/1EkiNmVN2B

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button