Kannada NewsLatestSports

*ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು*

ಪ್ರಗತಿವಾಹಿನಿ ಸುದ್ದಿ, ಕೊಲಂಬೋ: ಕೊಲಂಬೋದಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯವಳಿಯಲ್ಲಿ ಭಾನುವಾರ ಭಾರತ ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿತು.

ಮೊದಲು ಬ್ಯಾಟ್ ಮಾಡಿದ ಭಾರತ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತ್ತು. ಇದನ್ನು ಬೆನ್ನತ್ತಿದ ಪಾಕಿಸ್ತಾನ ಆರಂಭದಿಂದಲೇ ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತು. ಮೊದಲ ಓವರ್ ನಲ್ಲೇ ಯಾವುದೇ ರನ್ ಇಲ್ಲದೆ ವಿಕೆಟ್ ಕಳೆದುಕೊಂಡಿತು.

ನಂತರ ಕೂಡ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತ ಸೋಲಿನೆಡೆಗೆ ಹೆಜ್ಜೆ ಹಾಕಿತು. ಅಂತಿಮವಾಗಿ 114 ರನ್ ಗಳಿಸುವಷ್ಟರಲ್ಲಿ 17ನೇ ಓವರ್ ನಲ್ಲೇ ಎಲ್ಲ ವಿಕೆಟ್ ಕಳೆದುಕೊಂಡಿತು.

ಭಾರತ ಗೆಲ್ಲುತ್ತಿದ್ದಂತೆ ದೇಶಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button