Kannada NewsKarnataka NewsLatest

*ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಇಬ್ಬರು ಪ್ರಮುಖ ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದೆ.

2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ನಾಲ್ಕು ವರ್ಷಗಳ ಬಳಿಕ ಎನ್ ಐಎ ಅಧಿಕಾರಿಗಳು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ನೌಷಾದ್ (32) ಹಾಗೂ ಅಬ್ದುಲ್ ನಾಸಿರ್ (41)ಬಂಧಿತ ಆರೋಪಿಗಳು.

Home add -Advt

ಬೆಳ್ತಂಗಡಿಯ ಪದಂಗಡಿ ಪೊಯ್ಯಗುಡ್ಡೆ ನಿವಾಸಿ ನೌಷಾದ್ ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ. ಕೊಡಗಿನ ಸೋಮವಾರಪೇಟೆ ನಿವಾಸಿ ಅಬ್ದುಲ್ ನಾಸೀರ್ ನನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಲಾಗಿದೆ.

Related Articles

Back to top button