ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯ ರಾವ್ ಪೊಲೀಸರ ಮುಂದೆ ಶರಣಾಗಿದ್ದು, ಆತನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಇದರ ಬೆನ್ನಲ್ಲೇ ಆತನ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದ್ದ ಬೆನ್ನಲ್ಲೇ ಅಂದು ಮಧ್ಯಾಹ್ನ 2.30ಕ್ಕೆ ಇಂಡಿಗೋ ವಿಮಾನ ಸಂಸ್ಥೆಯ ಮ್ಯಾನೇಜರ್ಗೆ ಅನಾಮಧೇಯ ಕರೆಯೊಂದು ಬಂದಿತ್ತು. ಮಂಗಳೂರಿನಿಂದ ಹೈದರಾಬಾದ್ಗೆ ತೆರಳುವ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ವ್ಯಕ್ತಿ ಬೆದರಿಕೆಯೊಡ್ಡಿದ್ದ. ವಿಷಯ ತಿಳಿಯುತ್ತಿದ್ದಂತೆ ವಿಮಾನದಲ್ಲಿದ್ದವರನ್ನೆಲ್ಲ ಕೆಳಗಿಳಿಸಿ, ಬಾಂಬ್ಗಾಗಿ ಹುಡುಕಾಟ ನಡೆಸಲಾಗಿತ್ತು. ನಂತರ ಅದೊಂದು ಹುಸಿಕರೆ ಎಂಬುದು ಗೊತ್ತಾಗಿತ್ತು.
ತಮಗೆ ಫೋನ್ ಮಾಡಿ ಬೆದರಿಕೆಯೊಡ್ಡಿದ್ದು ಇದೇ ಆದಿತ್ಯ ರಾವ್ ಎಂದು ಇಂಡಿಗೋ ಸಂಸ್ಥೆಯ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ಆದಿತ್ಯ ರಾವ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ