Kannada NewsKarnataka NewsLatest

*ಇಂಡೀಗೋ ವಿಮಾನಕ್ಕೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇರ್ಸಲಾಗಿದ್ದು, ಸ್ಫೋಟಗೊಳ್ಳಲಿದೆ ಎಂದು ಬೆದರಿಕೆ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು.

ವಿಮಾನದ ಶೌಚಾಲಯದಲ್ಲಿ ಸ್ಫೋಟಕ ಸಾಧನವಿದೆ ಎಂದು ಪ್ರಯಾಣಿಕರೊಬ್ಬರು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿಗಳು ಪ್ರಯಾಣಿಕರನ್ನು ಕೆಳಗಿಳಿಸಿ ಇಡೀ ವಿಮಾನ್ ಅಪರಿಶೀಲಿಸಿದ್ದಾರೆ. ಆದರೆ ಯಾವುದೇ ಸ್ಫೋಟಕ ಪತ್ತೆಯಾಗಿಲ್ಲ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ವಿಮಾನ ಬೆಂಗಳೂರಿನಿಂದ ದೆಹಲಿಗೆ ಸುರಕ್ಷಿತವಾಗಿ ಪ್ರಯಾಣ ಬೆಳೆಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button