
ಪ್ರಗತಿವಾಹಿನಿ ಸುದ್ದಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ವಿಮಾನ ಸುರಕ್ಷಿತವಾಗಿ ಇಳಿದಿದ್ದು, ಬಾಂಬ್ ಪತ್ತೆ ದಳ, ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



