Kannada NewsLatestNational

*ಟೇಕ್ ಆಫ್ ಆದ ಮೂರೇ ನಿಮಿಷದಲ್ಲಿ ವಿಮಾನ ತುರ್ತು ಭೂ ಸ್ಪರ್ಶ*

ಪ್ರಗತಿವಾಹಿನಿ ಸುದ್ದಿ; ಪಾಟ್ನಾ: ಇಂಡಿಗೋ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.

ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ, ಟೇಕ್ ಆಫ್ ಆದ 3 ನಿಮಿಷಗಳಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ತಕ್ಷಣ ವಿಮಾನವನ್ನು ಲ್ಯಾಂಡಿಂಗ್ ಮಾಡಲಾಯಿತು.

ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನದಲ್ಲಿ ತಾಂತ್ರಿಕದೋಷ ಕಂಡುಬಂದಿದ್ದು, ಪರಿಶೀಲನೆ ನಡೆಸಲಾಗಿದೆ.


Related Articles

Back to top button