Latest

KSRTC ಬಸ್-ಲಾರಿ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಹೊಸಕೋಟೆ: ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಕೆ ಎಸ್ ಆರ‍್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆ-ಕೋಲಾರ ಮುಖ್ಯರಸ್ತೆಯ ಮೈಲಾಪುರ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಕೋಲಾರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಆಂಧ್ರಪ್ರದೇಶ ಮೂಲದ ದಂಪತಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ದಕ್ಷ ಅಧಿಕಾರಿಗಳಿಗೆ ದಲಿತ ವಿರೋಧಿ ಪಟ್ಟ ಸಲ್ಲದು

Related Articles

Back to top button