Kannada News

ನಾಮಪತ್ರ ವಾಪಸ್ ಪಡೆದವರು ಪಕ್ಷೇತರ ಅಭ್ಯರ್ಥಿ ಲಕ್ಷ್ಮೀ ಮನೋಹರ್ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ವಾಪಸ್ ಪಡೆದಿದ್ದಾರೆ ಎನ್ನುವ ಸುದ್ದಿ ಹರಡಲಾಗುತ್ತಿದೆ.

ಆದರೆ ಇಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಲಕ್ಷ್ಮೀ ಮನೋಹರ ಹೆಬ್ಬಾಳಕರ್ ಎನ್ನುವವರು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ರವೀಂದ್ರ ಹೆಬ್ಬಾಳಕರ್ ಕಣದಿಂದ ಹಿಂದೆ ಸರಿದಿಲ್ಲ.

Home add -Advt

ಜನರ ದಿಕ್ಕು ತಪ್ಪಿಸಲೆಂದೇ ಕೆಲವರು ಕಂಗ್ರಾಳಿಯ ಲಕ್ಷ್ಮೀ ಮನೋಹರ ಹೆಬ್ಬಾಳಕರ್ ಎನ್ನುವವರಿಂದ ನಾಮಪತ್ರ ಹಾಕಿಸಿದ್ದರು. ಆದರೆ ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನ ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಆದರೆ ಕೆಲವರು ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ವಾಪಸ್ ಎಂದು ಸುದ್ದಿ ಹರಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.

https://pragati.taskdun.com/lakshmi-hebbalkar-received-a-celebratory-welcome-in-the-villages-the-villagers-said-that-you-should-become-an-mla-again-and-again/

Related Articles

Back to top button