ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಇಂದಿರಾ ಕ್ಯಾಂಟೀನ್ ಊಟದ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಇಂದಿರಾ ಕ್ಯಾಂಟೀನ್ ಗೆ ಆಹಾರ ಸರಬರಾಜುದಾರರಿಗೆ ಸರ್ಕಾರ ನೀಡುವ ದರ 5ರೂ ಹೆಚ್ಚಳವಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ.
ಈ ಮೊದಲು ಆಹಾರ ಸರಬರಾಜುದಾರರಿಗೆ ಬೆಳಗಿನ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಕ್ಕೆ ತಲಾ 57 ರೂ ನೀಡಲಾಗುತ್ತಿತ್ತು. ಈಗ ಅದನ್ನು 62 ರೂಗೆ ಹೆಚ್ಚಿಸಲಾಗಿದೆ. ಆಹಾರ ಮೆನು ಬದಲಾವಣೆಯೊಂದಿಗೆ ಈ ಹೆಚ್ಚಳ ಮಾಡಲಾಗಿದೆಯೇ ಹೊರತು ಗ್ರಾಹಕರಿಗೆ ಹಳೆಯ ದರದಲ್ಲೇ ಹೊಸ ಮೆನು ಮತ್ತು ಇನ್ನಷ್ಟು ಉತ್ತಮ ಆಹಾರ ದೊರಕಲಿದೆ ಎಂದು ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ