Latest

ಭಾರತದ ವಿರುದ್ಧ ಮತ್ತೆ ಕ್ಯಾತೆ ತೆಗೆದ ಚೀನಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಉಭಯ ದೇಶಗಳ ನಡುವಿನ ಮಾತುಕತೆ ಬೆನ್ನಲ್ಲೇ ಚೀನಾ ಮತ್ತೆ ಕ್ಯಾತೆ ತೆಗೆದಿದ್ದು, ಭಾರತ-ಚೀನಾ ನಡುವಿನ ಸಂಘರ್ಷಕ್ಕೆ ಭಾರತವೇ ಕಾರಣ. ನಮಗೆ ಸೇರಿದ ಒಂದಿಂಚೂ ಜಾಗವನ್ನು ಬಿಡುವುದಿಲ್ಲ ಎಂದು ಚೀನಾ ಹೇಳಿದೆ.

ಮಾಸ್ಕೋದಲ್ಲಿ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಚೀನಾದ ರಕ್ಷಣಾ ಸಚಿವ ವೀ ಫೆಂಗಿ ಅವರ ನಡುವೆ ನಡೆದ ಮಾತುಕತೆ ಬೆನ್ನಲ್ಲೇ ಚೀನಾ ಈ ಹೇಳಿಕೆ ನೀಡಿದೆ. ಲಡಾಕ್ ಭೂ ಪ್ರದೇಶದಲ್ಲಿ ಉಭಯ ದೇಶಗಳ ನಡುವೆ ಭೂ ವಿವಾದ ಆರಂಭವಾಗಿದ್ದು, ಇದಕ್ಕೆ ಭಾರತವೇ ನೇರ ಹೊಣೆ. ಚೀನಾ ತನ್ನ ಭೂಪ್ರದೇಶದ ಒಂದಿಂಚನ್ನು ಕಳೆದುಕೊಳ್ಳಲು ಸಿದ್ಧವಾಗಿಲ್ಲ. ರಾಷ್ಟ್ರೀಯ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡುವಲ್ಲಿ ನಮ್ಮ ಸೇನೆ ಸಮರ್ಥವಾಗಿದೆ ಎಂದು ಚೀನಾ ಹೇಳಿಕೆ ಬಿಡುಗಡೆ ಮಾಡಿದೆ.

ಇತ್ತೀಚೆಗೆ ಪೂರ್ವ ಲಡಾಕ್ ನ ಪ್ಯಾಂಗೋಂಗ್ ಸರೋವರದ ದಕ್ಷಿಣ ಭಾಗದ ಪ್ರದೇಶಗಳ ಅತಿಕ್ರಮಣಕ್ಕೆ ಚೀನಾ ಸೇನೆ ಮುಂದಾಗಿದ್ದ ವೇಳೆ ಭಾರತೀಯ ಸೇನೆ ಚೀನಾಯತ್ನವನ್ನು ವಿಫಲಗೊಳಿಸಿತ್ತು. ಉಭಯದೇಶಗಳು ಗಡಿಭಾಗದಲ್ಲಿ ಹೆಚ್ಚಿನ ಸೇನೆ ನಿಯೋಜನಗೊಳಿಸಿದ್ದವು.ಇದರ ಬೆನ್ನಲ್ಲೇ ರಷ್ಯಾದ ಮಾಸ್ಕೊದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾ ರಕ್ಷಣಾ ಸಚಿವ ಜನರಲ್ ವೈ ಫೆಂಗೆ ಮೊದಲ ಬಾರಿಗೆ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button