Karnataka News

*ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಕ್ಯಾಬಿನೆಟ್ ನಲ್ಲಿ ಮಂಡನೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿಯನ್ನು ಇಂದು ಸಚಿವ ಸಂಪುಟದಲ್ಲಿ ಮಂಡಿಸಲಾಯಿತು.


ಈ ವರದಿ ಕುರಿತು ಚರ್ಚಿಸಲು ದಿನಾಂಕ 17.4.2025 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಲಾಗಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ತಿಳಿಸಿದರು.


ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟದಲ್ಲಿ ತೆರೆಯಲಾಯಿತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಲಕೋಟೆಯನ್ನು ತೆರೆದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸಂಜಯ ಶೆಟ್ಟೆಣ್ಣನವರ ಸಚಿವ ಸಂಪುಟಕ್ಕೆ ವಿವರಿಸಿದರು.


“ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ದಿನಾಂಕ: 29.02.2024 ರಂದು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ ವರದಿ 2024 ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅಂಶಗಳ ಸಮೀಕ್ಷಾ ವರದಿಯ ಮುಚ್ಚಿನ ಲಕೋಟೆಯನ್ನು ಸಚಿವ ಸಂಪುಟ ಸಭೆಯಲ್ಲಿ ತೆರೆದು ಪರಿಶೀಲಿಸಲು ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ.
ದಿನಾಂಕ: 29.02.2024 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾಧ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು 54 ಮಾನದಂಡಗಳಿಗೆ ಅನುಗುಣವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ 2024 ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅAಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು.
ರಾಜ್ಯದ 6.35 ಕೋಟಿ ಜನಸಂಖ್ಯೆಯಲ್ಲಿ 5.98 ಕೋಟಿ ಜನಸಂಖ್ಯೆ ಜನಗಣತಿಯಲ್ಲಿ ಒಳಗೊಂಡಿದೆ. 1.35 ಕೋಟಿ ಕುಟುಂಬಗಳು ಶೇ 94.17 ರಷ್ಟು ಮಾಹಿತಿ ಸಂಗ್ರಹಣೆಯಲ್ಲಿ ಪಾಲ್ಗೊಂಡಿವೆ. 37 ಲಕ್ಷ ಕುಟುಂಬಗಳು ಸಮೀಕ್ಷೆಯಲ್ಲಿ ಪಾಲ್ಗೊಂಡಿಲ್ಲ ಎಂದು ಸಚಿವರು ವಿವರಿಸಿದರು.
ಹೆಚ್. ಕಾಂತರಾಜ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2015ನೇ ಸಾಲಿನಲ್ಲಿ ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಏಪ್ರಿಲ್ 11, 2015 ರಿಂದ ಪ್ರಾರಂಭಿಸಿ, ಮೇ 30, 2015 ರಂದು ಪೂರ್ಣಗೊಳಿಸಲಾಗಿರುತ್ತದೆ.

Home add -Advt

ಈ ಸಮೀಕ್ಷೆಯಡಿ ಪ್ರತಿಯೊಂದು ಕುಟುಂಬದ ಸಾಮಾಜಿಕ, ಶೈಕ್ಷಣಿಕ ಆರ್ಥಿಕ, ರಾಜಕೀಯ ಪ್ರಾತಿನಿಧ್ಯ ಮತ್ತು ಔದ್ಯೋಗಿಕ ಸ್ಥಿತಿಗತಿಗಳ ಬಗ್ಗೆ 54 ಮಾನದಂಡಗಳನ್ನೊಳಗೊಂಡ ಕುಟುಂಬದ ಅನುಸೂಚಿ-3ರಲ್ಲಿ ಮಾಹಿತಿಯನ್ನು ಸಂಗ್ರಹಿಸಲಾಗಿರುತ್ತದೆ. ಸಮೀಕ್ಷೆಯ ಉದ್ದೇಶಕ್ಕಾಗಿ ಈ ಕೆಳಕಂಡ 6 ಜನ ವಿಷಯ ತಜ್ಞರನ್ನು ನೇಮಕ ಮಾಡಿಕೊಂಡು ಒಟ್ಟು 16 ವಿಷಯ ತಜ್ಞರ ಸಭೆಗಳನ್ನು ನಡೆಸಿ ವರದಿಗೆ ಬೇಕಾದ ತಃಖ್ತೆಗಳನ್ನು ಮತ್ತು ಮಾನದಂಡಗಳನ್ನು ಸಿದ್ದಪಡಿಸಲಾಗಿರುತ್ತದೆ.
1) ಪ್ರೊ ಜೋಗನ್ ಶಂಕರ್ ಕುಲಪತಿಗಳು, ಕುವೆಂಪು ವಿಶ್ವವಿದ್ಯಾಲಯ, ಶಿವಮೊಗ್ಗ.
2) ಪ್ರೊ ಅಬ್ದುಲ್ ಅಜೀಜ್ ಪ್ರಾಧ್ಯಾಪಕರು, ಅರ್ಥಶಾಸ್ತ್ರ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು.
3) ಡಾ: ಆಂಬ್ರೋಸ್ ಪಿಂಟೋ.ಎಸ್.ಜೆ, ಪ್ರಾಧ್ಯಾಪಕರು, ರಾಜ್ಯಶಾಸ್ತ್ರ, ಸೈಂಟ್ ಅಲೋಸಿಯಸ್ ಪದವಿ ಕಾಲೇಜು, ಬೆಂಗಳೂರು.
4) ಡಾ: ಸಿ.ಎಂ. ಲಕ್ಷ್ಮಣ್, ಸಹಾಯಕ ಪ್ರಾಧ್ಯಾಪಕರು, ಜನಸಂಖ್ಯಾ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು
5) ಲಕ್ಷ್ಮೀಪತಿ, ನಿರ್ದೇಶಕರು (ನಿವೃತ್ತ), ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ, ಬೆಂಗಳೂರು. 6) ಪ್ರೊ. ರಾಜಲಕ್ಷ್ಮೀ ಕಾಮತ್, ಸೆಂಟರ್ ಫಾರ್ ಪಬ್ಲಿಕ್ ಪಾಲಿಸಿ, ಐಐಎಂ ಬೆಂಗಳೂರು ರವರ ಪರವಾಗಿ ನವೀನ್ ಭಾರತಿ, ಐಐಎಂ, ಬೆಂಗಳೂರು. ಸಮೀಕ್ಷೆಯಲ್ಲಿ ಲಭ್ಯವಾಗಿರುವ ಅಂಕಿ-ಅಂಶಗಳನ್ನು ಆಯಾ ಜಿಲ್ಲೆಗಳಲ್ಲಿಯೇ ಗಣಕೀಕರಣಗೊಳಿಸಲಾಗಿದ್ದು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಸಂಸ್ಥೆಯ ಮೂಲಕ ಗಣಕೀಕರಣಕ್ಕಾಗಿ ರೂ.43.09 ಕೋಟಿಗಳನ್ನು ಬಿ.ಇ.ಎಲ್‌ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿರುತ್ತದೆ. 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಕೇಂದ್ರ ಸರ್ಕಾರದಿಂದ ರೂ.7.00 ಕೋಟಿ ಮತ್ತು ರಾಜ್ಯ ಸರ್ಕಾರದಿಂದ ರೂ.185.79 ಕೋಟಿ, ಹೀಗೆ ಒಟ್ಟು ರೂ.192.79 ಕೋಟಿ ಬಿಡುಗಡೆ ಮಾಡಲಾಗಿರುತ್ತದೆ. ಸಮೀಕ್ಷೆಗಾಗಿ ಇದುವರೆವಿಗೂ ಒಟ್ಟು ರೂ.165.51 ಕೋಟಿಗಳನ್ನು ವೆಚ್ಚ ಮಾಡಲಾಗಿರುತ್ತದೆ. 2015ರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಗಣಕೀಕರಣಗೊಳಿಸಿ ಅಂಕಿಅಂಶಗಳನ್ನು ಇಂಡಿಯನ್ ಇನ್ಸ್ಟಿಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯವರು ವ್ಯಾಲಿಡೇಷನ್ ಮಾಡಿ ವರದಿಯನ್ನು ನೀಡಿದ್ದು, ಅದರಂತೆ ಅಂತಿಮವಾಗಿ ಎಸ್.ಇ.ಎಸ್ 2015 ಡಾಟಾ ಈಸ್ ಕಂಸಿಸ್ಟೆಂಟ್ ವಿತ್ 2011 ಎಂದು ಸೆನ್ಸöಸ್ ದಾಖಲಿಸಿರುತ್ತಾರೆ. ದಿನಾಂಕ: 21.09.2019ರ ಸರ್ಕಾರದ ಆದೇಶದಲ್ಲಿ ಆಯೋಗದ ಅಧ್ಯಕ್ಷರಾಗಿದ್ದ ಹೆಚ್.ಕಾಂತರಾಜ ರವರ ಮತ್ತು ಸದಸ್ಯರುಗಳ ಪದಾವಧಿಯು ಮುಕ್ತಾಯಗೊಂಡಿದ್ದರಿAದ, ಸರ್ಕಾರಕ್ಕೆ ಸಾಮಾಜಿಕ ಮತ್ತು ಶೈಕ್ಷ ಣಿಕ ಸಮೀಕ್ಷೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಿಲ್ಲ. ಕೆ. ಜಯಪ್ರಕಾಶ ಹೆಗ್ಡೆ ಇವರ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ದಿನಾಂಕ:23.11.2020ರAದು ಸರ್ಕಾರದಿಂದ ನೇಮಕ ಗೊಂಡಿರುತ್ತದೆ.

ಶ್ರೀ ಹೆಚ್ ಕಾಂತರಾಜ ನೇತೃತ್ವದ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ಗಣಕೀಕರಣಗೊಳಿಸಿದ ದತ್ತಾಂಶಗಳನ್ನು ಉಪಯೋಗಿಸಿಕೊಂಡು ಕೆ. ಜಯಪ್ರಕಾಶ ಹೆಗ್ಡೆ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು “ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024” ವರದಿಯನ್ನು ಸಿದ್ದಪಡಿಸಿ ದಿನಾಂಕ: 29.02.2024 ರಂದು ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ ಎಂದು ತಿಳಿಸಿದರು.

ಏಪ್ರಿಲ್ 17 ರಂದು ಸಚಿವ ಸಂಪುಟ ಸಭೆ
ಇದೇ ಏಪ್ರಿಲ್ 17 ರಂದು ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಸಲ್ಲಿಸಿರುವ ಕರ್ನಾಟಕ ರಾಜ್ಯದ ಶೈಕ್ಷಣಿಕ, ಸಾಮಾಜಿಕ ಸಮೀಕ್ಷಾ ವರದಿಯ ಕುರಿತು ಚರ್ಚಿಸಲಾಗುವುದು ಎಂದು ಸಭೆಯಲ್ಲಿ ಸರ್ವಾನುಮತದ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

Related Articles

Back to top button