Karnataka News

*ಲಾರಿ ಹಾಗೂ ಟೂರಿಸ್ಟ್ ಬಸ್ ಭೀಕರ ಅಪಘಾತ: 17 ಜನರಿಗೆ ಗಂಭಿರ ಗಾಯ*

ಪ್ರಗತಿವಾಹಿನಿ ಸುದ್ದಿ: ಉಡುಪಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉದ್ಯಾವರ ಗ್ರಾಮದಲ್ಲಿ ನಡೆದಿದೆ.

Home add -Advt

ಉದ್ಯಾವರ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಅಪಘಾತಸಂಭವಿಸಿದೆ. ಇಂದು ಮುಂಜಾನೆ ಕೊಲ್ಲೂರು ದೇವಾಲಯಕ್ಕೆ ತೆರಳುತ್ತಿದ್ದ ಪ್ರವಾಸಿಗರ ಬಸ್ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪ್ರವಾಸಿಗರ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ 17 ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button