ಪ್ರಗತಿವಾಹಿನಿ ಸುದ್ದಿ: ಮೈಸೂರಿನಲ್ಲಿರುವ ಇನ್ಫೋಸಿಸ್ ಕಚೇರಿಯಿಂದ 700 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಈ ಸಂಬಂಧ ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಲಾಗಿದೆ.
ಟ್ರೈನಿ ಸಿಬ್ಬಂದಿ ಸಂಸ್ಥೆಯ ಆಂತರಿಕ ಪರೀಕ್ಷೆಯಲ್ಲಿ ನಪಾಸಾದ ಕಾರಣ ನೀಡಿ ಇನ್ಫೋಸಿಸ್ ತನ್ನ ಸಂಸ್ಥೆಯ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಸಿಬ್ಬಂದಿಯನ್ನು ಕಚೇರಿಯಿಂದ ಕಳಿಸುವ ವೇಳೆ ಬೌನ್ಸರ್ಸ್ ಹಾಗೂ ಸೆಕ್ಯುರಿಟಿ ಗಾರ್ಡ್ ಗಳನ್ನು ಬಳಸಿಕೊಂಡು ಬಲವಂತವಾಗಿ ಹೊರಹಾಕಿದೆ ಎಂಬ ಆರೋಪಗಳು ಕೇಳಿ ಬಂದಿವೆ.
ಕಾರ್ಮಿಕರನ್ನು ಪ್ರಾಣಿಗಳಂತೆ ಕಾಣುವ ಪರಿಪಾಠದ ವಿರುದ್ಧ ಸಿಡಿದೆದ್ದಿರುವ ಹೊರಬಿದ್ದ ಸಿಬ್ಬಂದಿ, ಸಂಸ್ಥೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾರ್ಮಿಕ ಸಚಿವಾಲಯಕ್ಕೆ ದೂರು ನೀಡಿದ್ದಾರೆ.
ಇನ್ಫೋಸಿಸ್ ನಿಂದ 700 ಉದ್ಯೋಗಿಗಳನ್ನು ಅನರ್ಹತೆಯ ಕಾರಣಕ್ಕಾಗಿ ತೆಗೆದುಹಾಕಲಾಗಿದ್ದು, ಮೂರು ಭಾರಿ ಅವಕಾಶ ನೀಡಿದ್ದರೂ ಕೆಲಸದ ಪ್ರಾವೀಣ್ಯತೆ ಪರೀಕ್ಷೆಯಲ್ಲಿ ಹಲವರು ಫೇಲ್ ಆದ ಹಿನ್ನೆಲೆಯಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ಮಾಹಿತಿ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ