CrimeKannada NewsKarnataka NewsLatest

*ಟಂ ಟಂ ಗೆ ಡಿಕ್ಕಿ ಹೊಡೆದ ಇನೋವಾ: ಯುವಕರಿಬ್ಬರ ಸಾವು*

ಪ್ರಗತಿವಾಹಿನಿ ಸುದ್ದಿ: ಇನೋವಾ ಕಾರು ಚಾಲಕನ ಅಜಾಗರೂಕತೆಯಿಂದ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ಇನೋವಾ ಹಾಗೂ ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ  ನಡೆದ ಅಪಘಾತದಲ್ಲಿ ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಎಂಬುವರು ಮೃತಪಟ್ಟಿದ್ದಾರೆ. 

ಇನ್ನು ನವನಗರದ 45 ನೇ ಸೆಕ್ಟರ್ ನಿವಾಸಿಗಳಾದ ವಿಶಾಲ ವರತಿಲ್ವೆ ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ.

ಇನೋವಾ ಕಾರು ಚಾಲಕನ ಅಜಾಗರೂಕತೆ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನ್ ಡಿಕ್ಕಿ ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂ ಟಂ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button