ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಇದೀಗ ಎಲ್ಲ ಹೊರ ರೋಗಿಗಳ ಹಾಗೂ
ಒಳರೋಗಿ ನೋಂದಣಿಯನ್ನು ಪ್ರಾರಂಭಿಸಲಾಗಿದೆ.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಈ ಕುರಿತು ಮಾಹಿತಿ ನೀಡಿದ್ದಾರೆ.
ಒಟ್ಟು 740 ಹಾಸಿಗೆಗಳು ಲಭ್ಯವಿದ್ದು ಅದರಲ್ಲಿ 500 ಹಾಸಿಗೆಗಳನ್ನು ಕೋವಿಡೇತರ (Non-covid) ರೋಗಿಗಳಿಗೆ ಹಾಗೂ 240 ಹಾಸಿಗೆಗಳನ್ನು ಕೊವಿಡ್-19 ಸೋಂಕಿತರ ಉಪಚಾರಕ್ಕಾಗಿ ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಪ್ರಾಥಮಿಕ ಹಾಗೂ ದ್ವೀತಿಯ ಹಂತದ ಚಿಕಿತ್ಸೆಗಳನ್ನು ಕೂಡ ಈಗಾಗಲೇ ಆರಂಭಿಸಲಾಗಿದೆ. ಹೆಚ್ಚಿನ ಚಿಕಿತ್ಸೆಯ ಅವಶ್ಯವಿದ್ದಲ್ಲಿ ಮಾತ್ರ ರೋಗಿಯನ್ನ ಆಯುಷ್ಯಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿತ ಆಸ್ಪತ್ರೆಗಳಿಗೆ ರೆಫರ್ ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ