
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗದಲ್ಲಿ ನಡೆದ ಅದ್ಧೂರಿ ರಾಜ್ಯೋತ್ಸವದ ವಿರುದ್ಧವಾಗಿ ಕರಾಳ ದಿನಾಚರಣೆ ಆಚರಿಸಿದ ಎಂಇಎಸ್ ಪುಂಡನ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದ ಇನ್ಸ್ಪೆಕ್ಟರ್ ವರ್ಗಾವಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಎಂಇಎಸ್ ಮುಖಂಡನ ಜೊತೆ ಸೆಲ್ಫಿ ಪಡೆಯುವ ಮೂಲಕ ವಿವಾದಕ್ಕೆ ಕಾರಣರಾಗಿದ್ದ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ.ಕಾಲಿಮಿರ್ಚಿ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಸಿಪಿಐ ಜೆ.ಎಂ.ಕಾಲಿಮಿರ್ಚಿ ಅವರಿಂದ ತೆರವಾದ ಸ್ಥಾನಕ್ಕೆ ನಗರದ ಸಿಇಎನ್ ಸಿಪಿಐ ಬಿ.ಆರ್ ಗಡೇಕರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಸ್ಥಳ ತೋರಿಸದೇ ಜೆ ಎಂ ಕಾಲಿಮಿರ್ಚಿ ವರ್ಗಾವಣೆ ಮಾಡಲಾಗಿದೆ.

