ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆ.ಆರ್.ಪುರ ಇನ್ಸ್ ಪೆಕ್ಟರ್ ನಂದೀಶ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರು, ಪೊಲೀಸ್ ಅಧಿಕಾರಿಗಳು ಸೇರಿ ಒಟ್ಟು 6 ಜನರ ವಿರುದ್ಧ ದೂರು ದಾಖಲಾಗಿದೆ.
ಇನ್ಸ್ ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವು ಪ್ರಕರಣ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಎಂಬುವವರು ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಬೈರತಿ ಬಸವರಾಜ್, ಬೆಂಗಳೂರು ಪೊಲೀಸ್ ಕಮಿಷ್ನರ್ ಪ್ರತಾಪ ರೆಡ್ದಿ, ಸಿಸಿಬಿ ಎಸಿಪಿ ರೀನಾ ಸುವರ್ಣ ಸೇರಿದಂತೆ 6 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.
ಬೈರತಿ ಬಸವರಾಜ್ ಅವರ ಕಿರುಕುಳದಿಂದಲೇ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸಚಿವರ ಸಂಬಂಧಿಕರಾದ ಚಂದ್ರು, ಗಣೇಶ್ ಎಂಬುವವರು ಹೇಳಿದಂತೆ ಕೇಳಲಿಲ್ಲ ಎಂದು ನಂದೀಶ್ ರನ್ನು ಟಾರ್ಗೆಟ್ ಮಾಡಿದ್ದರು. ಉದ್ದೇಶ ಪೂರ್ವಕವಾಗಿ ಸಿಸಿಬಿಗೆ ಮಾಹಿತಿ ನೀಡಿ ದಾಳಿ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೇ ನಂದೀಶ್ ಅಮಾನತು ಮಾಡುವಂತೆ ಒತ್ತಡ ಹಾಕಲಾಗಿದೆ. ಪೋಸ್ಟಿಂಗ್ ಗಾಗಿ ಬೈರತಿ ಬಸವಾರಜ್ ಗೆ 50 ಲಕ್ಷ ಹಾಗೂ ಗೃಹ ಸಚಿವರಿಗೆ 20 ಲಕ್ಷ ರೂಪಾಯಿ ನೀಡಲಾಗಿದೆ. ನ್ಯಾಚುರಲ್ ಜಸ್ಟೀಸ್ ಇಲ್ಲದೇ ನಂದೀಶ್ ರನ್ನು ಏಕಾಏಕಿ ಸಸ್ಪೆಂಡ್ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಬೆಳಗಾವಿ ಜಿಲ್ಲೆಯಿಂದ 10 ಜನರ ಗಡಿಪಾರು
https://pragati.taskdun.com/latest/exile-of-10-people-from-belgaum-district/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ