Belagavi NewsBelgaum NewsKannada NewsKarnataka NewsLatest
*ಕಾರು ಅಪಘಾತದಲ್ಲಿ ಮೃತಪಟ್ಟ ಇನ್ಸ್ ಪೆಕ್ಟರ್ ಮನೆಗೆ ಡಿಜಿ-ಐಜಿಪಿ ಸಲಿಂ ಭೇಟಿ*

ಪ್ರಗತಿವಾಹಿನಿ ಸುದ್ದಿ: ಕಾರ್ ಅಪಘಾತದಲ್ಲಿ ಮೃತಪಟ್ಟ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಅವರ ಮನೆಗೆ ರಾಜ್ಯ ಪೊಲೀಸ ಮಹಾನಿರ್ದೇಶಕ ಎಂ.ಎ.ಸಲೀಂ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ಸ್ವಗ್ರಾಮವಾದ ಸವದತ್ತಿ ತಾಲೂಕಿನ ಮುರಗೋಡದಲ್ಲಿರುವ ನಿವಾಸಕ್ಕೆ ಪೊಲೀಸ ಮಹಾನಿರ್ದೇಶಕ ಹಾಗೂ ಎಡಿಜಿಪಿ ಹಿತೇಂದ್ರ. ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಸೇರಿದಂತೆ ಇನ್ನಿತರ ಹಿರಿಯ ಪೊಲೀಸ ಅಧಿಕಾರಿಗಳು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ತಿಳಿಸಿದರು.




