ಪ್ರಗತಿವಾಹಿನಿ ಸುದ್ದಿ, ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಹೊರಬರುವುದು ಕಡಿಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಆನೆ ಮಾನವ ಸಂಘರ್ಷದ ಬಗ್ಗೆ ಮಾತನಾಡಿದ ಅವರು ಈ ಬಾರಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ.ಗಳನ್ನು ಮೀಸಲಿಡಲಾಗಿತ್ತು. ಪೂರ್ಣವಾಗಿ ತಡೆಗೋಡೆ ನಿರ್ಮಾಣವಾದರೆ ಆನೆ ಮಾನವ ಸಂಘರ್ಷ ತಪ್ಪಿಸಬಹುದು. ತಡೆಗೋಡೆ ನಿರ್ಮಾಣವಾದರೆ ನಿಂತುಹೋಗಲಿದೆ ಎಂದರು.
ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ
ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯನ್ನು . ಕರ್ನಾಟಕ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದ ವತಿಯಿಂದ 12 ಕೋಟಿ ರೂ.ಗಳ ವೆಚ್ಚದಲ್ಲಿ ಕಚೇರಿ ಕೊಡಗಿನ ಸಂಪ್ರದಾಯದಂತೆ ನಿರ್ಮಾಣವಾಗಿದೆ . ಕಚೇರಿ ಮುಖ್ಯವಲ್ಲ ಜನರ ಸಮಸ್ಯೆಗಳಿಗೆ ನ್ಯಾಯ ಕೊಡಿಸುವುದು ಬಹಳ ಮುಖ್ಯ ಎಂದರು.
ರಾಜ್ಯದಲ್ಲಿ ವಸತಿ ಗೃಹಗಳ ಕೊರತೆ ಇದ್ದು ಈ ನಿಟ್ಟಿನಲ್ಲಿ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ಗಮನ ಹರಿಸಲಿದೆ ಎಂದರು.
ಚಿಕ್ಕಹೆಜ್ಜಾಲದಲ್ಲಿ ಪೊಲೀಸ್ ತರಬೇತಿ ಶಾಲೆ ಸ್ಥಾಪಿಸುವ ಬಗ್ಗೆ ಬೇಡಿಕೆ ಇರುವ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ. ಬಂದರೆ ಪರಿಶೀಲಿಸಲಾಗುವುದು ಎಂದರು.
ತಡೆಯಾಜ್ಞೆ ತೆರವುಗೊಂಡ ನಂತರ ಕ್ರಮ
ಹಿಂದಿನ ಸರ್ಕಾರದ ಅವಧಿಯಲ್ಲಿ ಗುಂಡೂರಾವ್ ಬಡಾವಣೆಯಲ್ಲಿ ನ ಪೊಲೀಸ್ ಇಲಾಖೆ ಕಟ್ಟಡಕ್ಕೆ ಅಡಿಪಾಯ ಹಾಕಿದ್ದು,ಅದಕ್ಕೆ ಉಚ್ಚನ್ಯಾಯಾಲಯದಲ್ಲಿ ತಡೆಯಾಜ್ಞೆ ದೊರಕಿದೆ. ತಡೆಯಾಜ್ಞೆ ತೆರವುಗೊಂಡ ನಂತರ ಕ್ರಮ ವಹಿಸಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ಚೆನ್ನಾಗಿ ನೋಡಿಕೊಂಡಿದೆ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಲವೇ ದಿನಗಳಲ್ಲಿ ಲಕ್ಷಣ ಸವದಿಯವರೂ ಬಿಜೆಪಿಗೆ ಮರಳಲಿದ್ದಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಟಿಕೆಟ್ ಮೇಲೆ ಲಕ್ಹ್ಮಣ ಸವದಿ ಚುನಾಯಿತರಾಗಿದ್ದಾರೆ. ಜಗದೀಶ್ ಶೆಟ್ಟರ್ ಅವರು ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಅವರನ್ನು ಚೆನ್ನಾಗಿ ನೋಡಿಕೊಂಡಿದೆ. ಈ ಬಗ್ಗೆ ಏನೂ ಹೇಳಲು ಹೋಗುವುದಿಲ್ಲ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ