ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ಪೊಲೀಸರಿಗೆ ಜೀವ ವಿಮೆ ಮತ್ತು ತುಟ್ಟಿ ಭತ್ಯೆ ನೀಡಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಈ ಹಿಂದೆ ಕೋವಿಡ್-19 ವಿರುದ್ಧ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಿರುವ ವೈದ್ಯರಂತೆಯೇ ಪೊಲೀಸರಿಗೂ 30 ಲಕ್ಷ ರೂ. ಜೀವ ವಿಮೆ ಸೌಲಭ್ಯವನ್ನು ಘೋಷಿಸಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದರು. ಕೊರೋನಾ ವಿರುದ್ಧದ ಸಮರದಲ್ಲಿ ಸಾವನ್ನಪ್ಪುವ ಪೊಲೀಸರಿಗೆ 30 ಲಕ್ಷ ರೂ. ನೀಡುವುದಾಗಿ ತಿಳಿಸಿದ್ದರು.
ಇದರ ಬೆನ್ನಲ್ಲೇ ಈಗ ಟ್ವೀಟ್ ಮಾಡಿರುವ ಪೊಲೀಸ್ ಮಹಾ ನಿರ್ದೇಶಕರು, ಪೊಲೀಸರು, ಹೋಂ ಗಾರ್ಡ್ಸ್, ಅಗ್ನಿಶಾಮಕ ಸಿಬ್ಬಂದಿ, ಸಿವಿಲ್ ಡಿಫೆನ್ಸ್, ಕಾರಾಗೃಹ ಸಿಬ್ಬಂದಿಗೆ ಸರ್ಕಾರದ ಪರವಾಗಿ ಸಿಹಿಸುದ್ದಿ ನೀಡಿದ್ದು, ಜೀವ ವಿಮೆ ಮತ್ತು ತುಟ್ಟಿ ಭತ್ಯೆ ನೀಡುವುದಾಗಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ